Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಚಾರ್...

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಚಾರ್ ವರದಿ ಅನುಷ್ಠಾನ

ಡಿಕೆಎಸ್‌ಸಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಎಚ್.ಡಿ.ದೇವೇಗೌಡ

4 Dec 2016 5:20 PM IST
share
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಚಾರ್ ವರದಿ ಅನುಷ್ಠಾನ

ಕಾಪು, ಡಿ.4: ಸಾಚಾರ್ ವರದಿಯನ್ನು ಮುಂದಿನ ಚುನಾವಣೆಯ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿ, ಮುಂದೆ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಅದನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿ ದ್ದಾರೆ.

ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಮಂಗಳೂರು ಇದರ 20ನೆ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಮೂಳೂರಿನ ಅಲ್‌ಇಹ್ಸಾನ್ ಕ್ಯಾಂಪಸ್‌ನಲ್ಲಿ ರವಿವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಮುಸ್ಲಿಮ್ ಸಮುದಾಯದ ಸ್ಥಿತಿಗತಿ ಬಗ್ಗೆ ಸರಿಯಾಗಿ ಅರಿತುಕೊಂಡಿ ದ್ದೇನೆ. ಮುಸ್ಲಿಮ್ ಬಾಂಧವರು ಬಡತನದಲ್ಲೂ ಸ್ವಾಭಿಮಾನದಿಂದ ತಮ್ಮ ವೃತ್ತಿ ಜೀವನ ನಡೆಸುತಿದ್ದಾರೆ. ಈ ಬಗ್ಗೆ ಸಾಚಾರ್ ವರದಿಯಲ್ಲಿ ಉಲ್ಲೇಖಿ ಸಲಾಗಿದ0ಎ. ಮುಂದಿನ ಚುನಾವಣೆಯಲ್ಲಿ ಈ ವಿಷಯದ ವರದಿಯ ಬಗ್ಗೆ ಸಂಪೂರ್ಣ ಅರಿತುಕೊಳ್ಳಲಾಗುವುದು ಎಂದರು.

ಮಾನವೀಯ ವೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರನ್ನು ದೇಶದ ಸತ್ಪ್ರಜೆಯನ್ನಾಗಿ ಮಾಡಬೇಕು. ದೇವರು ಒಬ್ಬನೇ ಆದರೂ ಕೆಲವೊಂದು ದುಷ್ಠ ಶಕ್ತಿಗಳು ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈಹಾಕು ತ್ತಿವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬೇಡಿ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಅಗತ್ಯ ಎಂದು ಅವರು ತಿಳಿಸಿದರು.

 ಕಾಪು ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸೇವೆ ಸಲ್ಲಿಸುವ ಮೂಲಕ ಇತರ ಸಂಸ್ಥೆಗಳಿಗೆ ಸುನ್ನೀ ಸೆಂಟರ್ ಮಾದರಿಯಾಗಿದೆ. ರಾಜ್ಯ ಸರಕಾರದಿಂದ ಈ ಸಂಸ್ಥೆಗೆ ಎಲ್ಲಾ ರೀತಿಯ ಅನುದಾನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾ ಗುವುದು ಎಂದು ಭರವಸೆ ನೀಡಿದರು.

20 ಜೋಡಿ ಹಸೆಮಣೆಗೆ:

ಈ ಸಾಮೂಹಿಕ ವಿವಾಹ ಕಾರ್ಯಕ್ರಮ ದಲ್ಲಿ 20 ಬಡ ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಉಡುಪಿ ಜಿಲ್ಲಾ ಖಾಝಿ ಮತ್ತು ಮೂಳೂರು ಅಲ್ ಇಹ್ಸಾನ್ ಶರೀಅತ್ ಕಾಲೇಜಿನ ಪ್ರಾಂಶುಪಾಲ ಅಲ್‌ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಹಾಗೂ ವೌಲಾನಾ ಡಾ.ಮುಹಮ್ಮದ್ ಪಾಝಿಲ್ ರಝ್ವಿ ಕಾವಲ್‌ಕಟ್ಟೆ ನಿಖಾಹ್ ನೇತೃತ್ವ ವಹಿಸಿದ್ದರು. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಅಸ್ಸಯ್ಯಿದ್ ಅಲಿ ಬಾಫಕಿ ತಂಙಳ್ ದುವಾ ನೆರವೇರಿಸಿದರು. ವಧುಗಳಿಗೆ ತಲಾ 8 ಪವನ್ ಚಿನ್ನಾಭರಣ ಹಾಗೂ ಜೋಡಿಗಳಿಗೆ ತಲಾ 50ಸಾವಿರ ರೂ. ಸಹಾಯಧನವನ್ನು ವಿತರಿಸಲಾಯಿತು. ಡಿಕೆಎಸ್‌ಸಿ ಅಧ್ಯಕ್ಷ ಅಲ್‌ಹಾಜ್ ಅಸ್ಸಯ್ಯಿದ್ ಕೆ.ಎಸ್. ಆಟಕೋಟ ತಂಙಳ್ ಕುಂಬೋಲ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಶಾಫಿ ಸಅದಿ ನಂದಾವರ, ಫಿಝಾ ಗ್ರೂಪ್‌ನ ಆಡಳಿತ ನಿರ್ದೇಶಕ ಬಿ.ಎಂ.ಫಾರೂಕ್, ಉದ್ಯಮಿ ಅಸ್ಲಂ ಖಾಝಿ, ಕೃಷ್ಣಾಪುರ ಬದ್ರಿಯಾ ಮುಸ್ಲಿಂ ಜಮಾಅತ್ ಖಾಝಿ ಇ.ಕೆ. ಇಬ್ರಾಹಿಂ ಮುಸ್ಲಿಯಾರ್, ಎಸ್‌ವೈಎಸ್ ರಾಜ್ಯಾಧ್ಯಕ್ಷ ಹುಸೈನ್ ಸಅದಿ ಕೆಸಿ ರೋಡ್, ಕೆ.ಸಿ.ಎಫ್. ಅಂತಾರಾಷ್ಟ್ರೀಯ ಕೌನ್ಸಿಲ್ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ, ಎಸ್‌ಇಡಿಸಿ ಅಧ್ಯಕ್ಷ ಕೆ.ಕೆ.ಎಂ.ಕಾಮಿಲ್ ಸಖಾಫಿ, ಸುನ್ನೀ ಗೈಡನ್ಸ್ ಬ್ಯೂರೋ ಅಧ್ಯಕ್ಷ ಮುಹಮ್ಮದ್ ಅಲ್ ಕಾಸಿಮಿ ಅಳಕೆಮಜಲು, ಅಬ್ಬಾಸ್ ಮುಂಚೂರು, ವೈ.ಮುಹಮ್ಮದ್ ಹಾಜಿ, ಝಕರಿಯಾ ಜೋಕಟ್ಟೆ, ಡಾ.ಬಿ.ಕೆ. ಯೂಸುಫ್, ಅಶ್ಪಾಕ್ ಕರ್ನಿರೆ, ಅಶ್ರಫ್ ಕರ್ನಿರೆ, ಹಸನುಲ್ ಪೈಝಿ ಅಜ್ಜಾವರ, ಸಂಸ್ಥೆಯ ಮ್ಯಾನೇಜರ್ ಮುಸ್ತಫಾ ಸಅದಿ ಮೊದಲಾದವರು ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ಅಲ್‌ಹಾಜ್ ಬಿ.ಎಂ.ಮುಮ್ತಾಝ್ ಅಲಿ ಕೃಷ್ಣಾಪುರ ಸ್ವಾಗತಿಸಿದರು. ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ ವಂದಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾರ್ವಜನಿಕ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು.

share
Next Story
X