Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಲಿಮಾರು ಮಠದ ಪರ್ಯಾಯಕ್ಕೆ ಬಾಳೆ ಮುಹೂರ್ತ

ಪಲಿಮಾರು ಮಠದ ಪರ್ಯಾಯಕ್ಕೆ ಬಾಳೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ4 Dec 2016 8:12 PM IST
share
ಪಲಿಮಾರು ಮಠದ ಪರ್ಯಾಯಕ್ಕೆ ಬಾಳೆ ಮುಹೂರ್ತ

32ನೇ ಚಕ್ರದ ಮೊದಲ ಪರ್ಯಾಯಕ್ಕೆ ಪೂರ್ವಸಿದ್ಧತೆ ಪ್ರಾರಂಭ

ಉಡುಪಿ, ಡಿ.4:  2018ರ ಜನವರಿ 18ರ ಮುಂಜಾನೆ ನಡೆಯುವ ಉಡುಪಿ ಶ್ರೀಕೃಷ್ಣಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಎರಡನೇ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳಲ್ಲಿ ಮೊದಲನೆಯದಾದ ಬಾಳೆ ಮುಹೂರ್ತ ಇಂದು ಬೆಳಗ್ಗೆ 8:32ಕ್ಕೆ ಮಥುರಾಛತ್ರದ ಬಳಿಯ ಮಠದ ಜಾಗದಲ್ಲಿ ನಡೆಯಿತು.

 ಉಡುಪಿಯಲ್ಲಿರುವ ಅಷ್ಟಮಠಗಳ ನಡುವೆ ಶ್ರೀಕೃಷ್ಣನ ಪೂಜೆಗೆ ದ್ವೈವಾರ್ಷಿಕ ಪರ್ಯಾಯ ಸಂಪ್ರದಾಯ ಪ್ರಾರಂಭಗೊಂಡ ನಂತರ,  ಈಗ ನಡೆದಿರುವ ಪೇಜಾವರ ಶ್ರೀಗಳ ದಾಖಲೆಯ 5ನೇ ಪರ್ಯಾಯ 31ನೇ ಚಕ್ರದ ಕೊನೆಯ (ಅಂದರೆ 248ನೇ) ಪರ್ಯಾಯವಾಗಿದೆ.

ಪರ್ಯಾಯದ 32ನೇ ಚಕ್ರ ಪಲಿಮಾರು ಮಠದ ಪರ್ಯಾಯದೊಂದಿಗೆ (249ನೇ) 2018ರ ಜ.18ರಂದು ಪ್ರಾಂಭಗೊಳ್ಳಲಿದೆ.

ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಹೆರ್ಗ ವೇದವ್ಯಾಸ ಆಚಾರ್ಯರ ನೇತೃತ್ವದಲ್ಲಿ ಬಾಳೆ ಮುಹೂರ್ತದ ಸಾಂಪ್ರದಾಯಿಕ ವಿಧಿವಿಧಾನಗಳು ನಡೆದವು. ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸೇರಿದಂತೆ ಅನೇಕ ಮಂದಿ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ರಥಬೀದಿಯಲ್ಲಿರುವ ಪಲಿಮಾರು ಮಠದಲ್ಲಿ ನವಗ್ರಹ ಪೂಜೆ ಹಾಗೂ ಪ್ರಾರ್ಥನೆಯ ಬಳಿಕ ಚಂದ್ರವೌಳೀಶ್ವರ, ಅನಂತೇಶ್ವರ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಶ್ರೀಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣರಿಗೆ, ಗೋಶಾಲೆ, ಗುರುಗಳ ಬೃಂದಾವನಗಳಲ್ಲಿ ಪ್ರಾರ್ಥಿಸಲಾಯಿತು.

ಅನಂತರ ಶ್ರೀಮಠಕ್ಕೆ ಮರಳಿ ಬಾಳೆಗಿಡ, ತುಳಸಿ, ಕಬ್ಬುಗಳೊಂದಿಗೆ ರಥಬೀದಿಯಲ್ಲಿ ಮೆರವಣಿಗೆಯಲ್ಲಿ ಬಂದು ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದ ಬಳಿ ಇರುವ ಪಲಿಮಾರು ಮಠದ ಜಾಗದಲ್ಲಿ ಬಾಳೆಗಿಡ, ತುಳಸಿ ಹಾಗೂ ಕಬ್ಬಿನ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಸಹ ಅಲ್ಲಿ ಬಾಳೆ ಹಾಗೂ ಇತರ ಗಿಡಗಳನ್ನು ನೆಟ್ಟರು.

ಅನಂತರ ನವಗ್ರಹ ದಾನ ಹಾಗೂ ಉಳಿದ ಮಠಗಳ ಪ್ರತಿನಿಧಿಗಳಿಗೆ ಗೌರವ ಸಲ್ಲಿಸಲಾಯಿತು.

ತಮ್ಮ ಪರ್ಯಾಯಾವಧಿಯಲ್ಲಿ ಅನ್ನದಾನವೂ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಬೇಕಾಗುವ ಬಾಳೆಎಲೆ ಹಾಗೂ ತುಳಸಿಯನ್ನು ಶ್ರೀಪಾದರು ಇಲ್ಲಿಂದಲೇ ಪಡೆಯುವ ಸಂಪ್ರದಾಯವಿದೆ. ಪರ್ಯಾಯ ಪೂರ್ವ ಸಿದ್ಧತೆಯ ಎರಡನೇ ಕಾರ್ಯಕ್ರಮವಾಗಿ ಜ.20ರಂದು ಅಕ್ಕಿ ಮುಹೂರ್ತ ನಡೆಯಲಿದೆ. ಮುಂದೆ ಇದೇ ಸರಣಿಯಲ್ಲಿ ಕಟ್ಟಿಗೆ ಮುಹೂರ್ತ ಹಾಗೂ ಭತ್ತ ಮುಹೂರ್ತಗಳು ನಡೆಯಲಿವೆ.

 ಸಭಾ ಕಾರ್ಯಕ್ರಮ:

ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಪಲಿಮಾರು ಶ್ರೀಗಳು, ಉಡುಪಿಯ ಜನತೆಗೆ ಎರಡು ವರ್ಷಗಳಿಗೊಮ್ಮೆ ಪರ್ಯಾಯ ಬಂದರೆ, ನಮ್ಮ ಮಠ ಈ ಪರ್ಯಾಯಕ್ಕೆ 14 ವರ್ಷ ಕಾಯಬೇಕಾಗಿದೆ. ಮುಂದಿನ ತಮ್ಮ ಪರ್ಯಾಯಕ್ಕೆ ಊರಿನ ಸಮಸ್ತರ ಹಾಗೂ ಮಠದ ಭಕ್ತರು ಅಭಿಮಾನಿಗಳ ಸರ್ವ ಸಹಕಾರವನ್ನು ಕೋರಿದರು.

ಇದೇ ಸಂದರ್ಭದಲ್ಲಿ ಆರಂಭಿಸಲಾದ ಮಠದ ಆ್ಯಪ್‌ನ್ನು ಸ್ವಾಮೀಜಿ ಅನಾವರಣಗೊಳಿಸಿದರು.

 ಇದೇ ವೇಳೆ ಮಠದ ಎಲ್ಲಾ ವ್ಯವಹಾರಗಳನ್ನು ನಗದುರಹಿತವಾಗಿ ನಿರ್ವಹಿಸಲು ಇಲೆಕ್ಟ್ರಾನಿಕ್ಸ್ ಡಾಟಾ ಮಿಷನ್-ಸ್ವೈಪ್ ಮಿಷನ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಬಿಡುಗಡೆಗೊಳಿಸಿದರು.

ಪ್ರಥಮ ದೇಣಿಗೆಯಾಗಿ ಸಚಿವರು ಮಠಕ್ಕೆ 10,000ರೂ.ಗಳನ್ನು ಸ್ವೈಪ್ ಮಿಷನ್ ಮೂಲಕ ನೀಡಿದರು. 

ಸಮಾರಂಭದಲ್ಲಿ ಕಾಪು ಶಾಸಕ ವಿನಯಕುಮಾರ್ ಸೊರಕೆ, ಯು.ಆರ್. ಸಭಾಪತಿ, ಕೆ.ರಘುಪತಿ ಭಟ್, ಪಿ.ಆರ್.ಪ್ರಹ್ಲಾದ್, ಯಶ್ಪಾಲ್ ಸುವರ್ಣ, ಎಂ.ಬಿ.ಪುರಾಣಿಕ್, ಮಟ್ಟಾರು ರತ್ನಾಕರ ಹೆಗ್ಡೆ, ವಾಸುದೇವ ಅಸ್ರಣ್ಣ, ಹರಿನಾರಾಯಣ ಅಸ್ರಣ್ಣ, ಪ್ರದೀಪ್ ಕಲ್ಕೂರ, ಎ.ರತ್ನಕುಮಾರ್, ನಿ.ಬೀ.ವಿಜಯಬಲ್ಲಾಳ್, ಸುಕುಮಾರ್ ಶೆಟ್ಟಿ, ಮಠದ ದಿವಾಣರಾದ ಶಿಬರೂರು ವೇದವ್ಯಾಸ ತಂತ್ರಿ, ವ್ಯವಸ್ಥಾಪಕ ಬಲರಾಮ ಭಟ್, ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X