Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲ್ಯಾಂಪ್ಸ್ ಸಂಘದ ಸದಸ್ಯರ ಹೊರತು ಇತರರಿಗೆ...

ಲ್ಯಾಂಪ್ಸ್ ಸಂಘದ ಸದಸ್ಯರ ಹೊರತು ಇತರರಿಗೆ ಕಾಡುತ್ಪತ್ತಿ ಸಂಗ್ರಹಕ್ಕೆ ಹಕ್ಕಿಲ್ಲ: ಅಧ್ಯಕ್ಷರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ5 Dec 2016 2:50 PM IST
share

ಪುತ್ತೂರು, ಡಿ.5: ಸರಕಾರದ ಮಾರ್ಗಸೂಚಿ ಹಾಗೂ ಇಲಾಖೆಯ ನಿರ್ದೇಶನದಂತೆ ಅರಣ್ಯ ಪ್ರದೇಶದಲ್ಲಿನ ಪರಿಶಿಷ್ಟ ವರ್ಗದ ಲ್ಯಾಂಪ್ಸ್ ಸದಸ್ಯರ ಹೊರತು ಕಾಡುತ್ಪತ್ತಿಗಳಾದ ರಾಮಪತ್ರೆ, ದಾಲ್ಚೀನಿ ಎಲೆ, ಜೇನು, ಕಾಡು ಕರಿಮೆಣಸು, ಹುಣಸೆಹುಳಿ, ಇತ್ಯಾದಿಗಳನ್ನು ಸಂಗ್ರಹಿಸಲು ಅಥವಾ ಮಾರಾಟ ಮಾಡಲು ಅವಕಾಶಗಳಿಲ್ಲ ಎಂದು ಪುತ್ತೂರು ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ(ಲ್ಯಾಂಪ್ಸ್) ಅಧ್ಯಕ್ಷ ಮಂಜುನಾಥ ಅವರು ಸ್ಪಷ್ಟಪಡಿಸಿದ್ದಾರೆ.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಲ್ಯಾಂಪ್ಸ್ ಸಹಕಾರಿ ಸಂಘದ ಸದಸ್ಯರು ಕಿರು ಕಾಡುತ್ಪತ್ತಿಯನ್ನು ಸಂಗ್ರಹಿಸುತ್ತಿದ್ದಾರೆ. 2016-17ನೇ ಸಾಲಿನಲ್ಲಿ ಸಂಘಕ್ಕೆ ಮಂಗಳೂರು ಉಪರಣ್ಯ ಸಂಕ್ಷಣಾಧಿಕಾರಿಯವರಿಂದ ಕಿರುಕಾಡುತ್ಪತ್ತಿ ಸಂಗ್ರಹಣಾ ಹಕ್ಕು ಮಂಜೂರಾಗಿದ್ದು, ಕರಾರು ಪತ್ರ ದೊರಕಿರುತ್ತದೆ. ಈ ಹಿನ್ನಲೆಯಲ್ಲಿ ಸಂಘದ ನಿರ್ಣಯದಂತೆ ಸಂಗ್ರಹ ಹಂಚಿಕೆ ಮಾಡಲಾಗಿದೆ. 

ಆದರೆ ಸಂಘದ ಸದಸ್ಯರಲ್ಲದ ಕಡಬ ಮತ್ತು ಕುಟ್ರುಪ್ಪಾಡಿ ಗ್ರಾಮದ ಸುಮಾರು 50 ಮಂದಿ ಶನಿವಾರ ಯಾವುದೇ ಪೂರ್ವ ಸೂಚನೆ ನೀಡದೆ ಸಂಘದ ಕಚೇರಿ ಮುಂಬಾಗದಲ್ಲಿ ತಮಗೆ ಕಿರುಕಾಡುತ್ಪತ್ತಿ ಸಂಗ್ರಹಕ್ಕೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು, ಜೀವ ಬೆದರಿಕೆ ಒಡ್ಡಿರುವುದು ದುರುದ್ದೇಶ ಪೂರಿತ ಹಾಗೂ ಕಾನೂನು ಬಾಹಿರವಾಗಿರುತ್ತದೆ ಮತ್ತು ಖಂಡನೀಯವಾಗಿದೆ. 

ಪ್ರತಿಭಟನಾಕಾರರು ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಿದ್ದಾರೆ. ಕಾನೂನಿನ ಅಜ್ಞಾನದಿಂದ ಅವರು ಇಂತಹ ಕೆಲಸ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿರುವ ಅಧ್ಯಕ್ಷರು ತಮ್ಮ ಸಂಘವು ಸರಕಾರದ ಆದೇಶದಂತೆ ಮತ್ತು ಅರಣ್ಯ ಇಲಾಖೆಯ ಮಾರ್ಗಸೂಚಿಯಂತೆ 1977ರಿಂದ ಕಿರುಕಾಡುತ್ಪತ್ತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದು, ಇದರಿಂದ ಸಂಗ್ರಹವಾಗಿರುವ ಹಣವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತಿದೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಸಂಘದ ಮಾಜಿ ಅಧ್ಯಕ್ಷ ಜನಾರ್ದನ ಪೆರಾಜೆ, ಉಪಾಧ್ಯಕ್ಷೆ ಶಶಿಕಲಾ ನಾಯ್ಕ, ನಿದೇರ್ಶಕ ಉಮೇಶ್ ದಾಸರಮೂಲೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣಪಣ್ಣ ನಾಯ್ಕ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X