Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆತ್ಮಹತ್ಯೆ ಪ್ರಕರಣ: ಅಪರಾಧಿಗಳಿಗೆ 5ವರ್ಷ...

ಆತ್ಮಹತ್ಯೆ ಪ್ರಕರಣ: ಅಪರಾಧಿಗಳಿಗೆ 5ವರ್ಷ ಸಜೆ

ವಾರ್ತಾಭಾರತಿವಾರ್ತಾಭಾರತಿ5 Dec 2016 11:55 PM IST
share

ಮಂಗಳೂರು, ಡಿ.5: ಬೆಳ್ತಂಗಡಿಯಲ್ಲಿ 2011ರ ಮಾರ್ಚ್ 16ರಂದು ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿ ಸೋಮವಾರ ತೀರ್ಪು ನೀಡಿರುವ ಮಂಗಳೂರಿನ ಒಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ತಲಾ 5 ವರ್ಷಗಳ ಕಠಿಣ ಸಜೆ ಮತ್ತು ತಲಾ 10 ಸಾವಿರ ರೂ.ದಂಡ ಶಿಕ್ಷೆ ವಿಧಿಸಿದೆ.

ಬೆಳ್ತಂಗಡಿ ಕನ್ಯಾಡಿಯ ರೂಪಾವತಿ (34) ಮತ್ತು ಈಕೆಯ ಪ್ರಿಯಕರ ಬೆಳ್ತಂಗಡಿ ಕಾಣಿಯೂರು ಗ್ರಾಮದ ಪದ್ಮುಂಜ ಕೆದಿಲ ನಿವಾಸಿ ದಿನೇಶ್ ಗೌಡ(32)ಶಿಕ್ಷೆಗೊಳಗಾದ ಅಪರಾಧಿಗಳು. ರೂಪಾವತಿ ದಿನೇಶ್ ಗೌಡನೊಂದಿಗೆ ಸೇರಿಕೊಂಡು ಗಂಡ ಸದಾಶಿವ ಗೌಡ (40)ನ ಆತ್ಮಹತ್ಯೆಗೆ ಕಾರಣವಾಗಿದ್ದಳು.

ಸದಾಶಿವ ಗೌಡ ಮತ್ತು ದಿನೇಶ್ ಗೌಡ ಆತ್ಮೀಯ ಸ್ನೇಹಿತರಾಗಿದ್ದು, ಗದಗ್‌ನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ವ್ಯಾಪಾರ ಆರಂಭಿಸಿದ್ದರು. 2005 ಆಗಸ್ಟ್ 22ರಂದು ಸದಾಶಿವ ಗೌಡರ ಮದುವೆ ರೂಪಾವತಿ ಎಂಬಾಕೆಯ ಜತೆ ನಡೆದಿತ್ತು. ರೂಪಾವತಿಯ ಮೇಲೆ ಕಣ್ಣಿಟ್ಟಿದ್ದ ದಿನೇಶ್ ಗೌಡ ಅಂತಿಮವಾಗಿ ಆಕೆಯ ಸಖ್ಯ ಬೆಳೆಸಿದ್ದ. ಇದು ಸದಾಶಿವ ಗೌಡರಿಗೆ ಗೊತ್ತಾಗಿ ಅವರು ಸಾಕಷ್ಟು ಬುದ್ದಿ ಹೇಳಿದ್ದರು. ಆದರೆ ಅದು ಲಕಾರಿಯಾಗದೇ ಇದ್ದಾಗ ಪತ್ರ ಬರೆದಿಟ್ಟು 2011ರ ಮಾರ್ಚ್ 15ರಂದು ವಿಷ ಸೇವಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಲಕಾರಿಯಾಗದೆ ಮಾ.16ರಂದು ಮೃತಪಟ್ಟಿದ್ದರು.

ಈ ಬಗ್ಗೆ ಸದಾಶಿವ ಅವರ ಸಹೋದರ ಶ್ರೀನಿವಾಸ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಂದಿನ ಸಬ್‌ಇನ್‌ಸ್ಪೆಕ್ಟರ್ ಎಂ.ಆರ್.ಎಂ. ತಹಶೀಲ್ದಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಒಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಜೋಶಿ ಅವರು ವಾದ-ಪ್ರತಿವಾದವನ್ನು ಆಲಿಸಿ ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದು ಇಬ್ಬರೂ ಆರೋಪಿಗಳಿಗೆ ತಲಾ 5 ವರ್ಷಗಳ ಕಠಿಣ ಸಜೆ ಮತ್ತು ತಲಾ 10ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 6 ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದೆ.

ದಂಡದ ಮೊತ್ತದಲ್ಲಿ 15 ಸಾವಿರ ರೂ.ನ್ನು ಮೃತ ಸದಾಶಿವ ಗೌಡ ಅವರ ತಾಯಿಗೆ ನೀಡಬೇಕು ಮತ್ತು ಮೃತ ಸದಾಶಿವ ಗೌಡ ಅವರ ಪುತ್ರನಿಗೆ ಸೂಕ್ತ ಪುನರ್ವಸತಿ ವ್ಯವಸ್ಥೆ ಮಾಡುವಂತೆ ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಇದರ ಹೊರತಾಗಿ ಸದಾಶಿವ ಗೌಡರ ತಾಯಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ ಪರಿಹಾರ ಪಡೆಯಲು ಅವಕಾಶವಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ಒಟ್ಟು 15 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ ರಾಜು ಪೂಜಾರಿ ಬನ್ನಾಡಿ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X