ಜೂಜಾಟ: 37 ಆರೋಪಿಗಳ ಬಂಧನ
ಚಿಕ್ಕಮಗಳೂರು, ಡಿ.6: ನಗರದ ಕುರುವಂಗಿ ರಸ್ತೆಯಲ್ಲಿರುವ ರತ್ನಗಿರಿ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಸಂಘದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ 37 ಮಂದಿಯನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಬಂಧಿಸಿರುವ ಘಟನೆ ನಡೆದಿದೆ.
ಆರೋಪಿಗಳಿಂದ 1.40 ಲಕ್ಷ ರೂ. ನಗದು, 13 ಕಾರುಗಳು, 17 ಮೋಟಾರ್ ಸೈಕಲ್, 24 ಮೊಬೈಲ್‌ಫೋನ್‌ಗಳು, 3 ಮರದ ಟೇಬಲ್, 15 ಪ್ಲಾಸ್ಟಿಕ್ ಕುರ್ಚಿಗಳು ಮತ್ತು ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Next Story





