ಅಭ್ಯಾಸ ಪಂದ್ಯಕ್ಕೆ ಯಾಸಿರ್ ಶಾ ಅಲಭ್ಯ

ಮೆಲ್ಬೋರ್ನ್, ಡಿ.6: ಗಾಯಾಳು ಪಾಕಿಸ್ತಾನದ ಲೆಗ್-ಸ್ಪಿನ್ನರ್ ಯಾಸಿರ್ ಶಾ ಅಭ್ಯಾಸ ನಡೆಸಲು ಆರಂಭಿಸಿದ್ದಾರೆ. ಆದರೆ, ವೈದ್ಯರ ಸಲಹೆ ಮೇರೆಗೆ ಇನ್ನು ಕೆಲವು ದಿನ ವಿಶ್ರಾಂತಿ ಪಡೆಯಲಿದ್ದಾರೆ.
ಪಾಕಿಸ್ತಾನ ಡಿ.8 ರಿಂದ ಕ್ರಿಕೆಟ್ ಆಸ್ಟ್ರೇಲಿಯ ಇಲೆವೆನ್ ತಂಡದ ವಿರುದ್ಧ ತ್ರಿದಿನ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಯಾಸಿರ್ ಆಡುವುದಿಲ್ಲ. ಮೂರು ಪಂದ್ಯಗಳ ಟೆಸ್ಟ್ ಸರಣಿ ಡಿ.15 ರಂದು ಬ್ರಿಸ್ಬೇನ್‌ನಲ್ಲಿ ಆರಂಭವಾಗಲಿದೆ.
2014ರ ಅಕ್ಟೋಬರ್‌ನಲ್ಲಿ ಕ್ರಿಕೆಟ್‌ಗೆ ಕಾಲಿಟ್ಟಿರುವ ಯಾಸಿರ್ ಪಾಕಿಸ್ತಾನದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿರುವ ಯಾಸಿರ್ 116 ವಿಕೆಟ್‌ಗಳನ್ನು ಕಬಳಿಸಿದ್ದಾರೆ.ಈ ವರ್ಷಾರಂಭದಲ್ಲಿ ದುಬೈನಲ್ಲಿ ನಡೆದ ಟೆಸ್ಟ್‌ನಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್‌ಗಳನ್ನು (17 ಪಂದ್ಯಗಳು) ಪೂರೈಸಿದ ಸಾಧನೆ ಮಾಡಿದ್ದರು.
ಶೇನ್ ವಾರ್ನ್ ಬಳಿಕ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಮೊದಲ ಲೆಗ್ ಸ್ಪಿನ್ನರ್ ಆಗಿದ್ದಾರೆ. ಡಿ.1996ರ ಬಳಿಕ ಈ ಸಾಧನೆ ಮಾಡಿದ ಪಾಕ್‌ನ ಮೊದಲ ಬೌಲರ್ ಆಗಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಟೆಸ್ಟ್ ಸರಣಿಗೆ 16 ಸದಸ್ಯರ ಆಟಗಾರರ ಪೈಕಿ ಎಡಗೈ ಸ್ಪಿನ್ನರ್ ಮುಹಮ್ಮದ್ ನವಾಝ್ ಇನ್ನೊಬ್ಬ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿದ್ದಾರೆ.





