ದಾಖಲೆ ಇಲ್ಲದೆ ನಗದು ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಕಾರವಾರ, ಡಿ.7 : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 37.78ಲಕ್ಷ ಅಕ್ರಮ ಹಣವನ್ನು ಪೊಲೀಸರು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬುಧವಾರ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅಬ್ದುಲ್ ಬಂಧಿತ ಆರೋಪಿ.
ಈತ 2 ಸಾವಿರ ಮುಖಬೆಲೆಯ 32 ಲಕ್ಷ ,100.ರೂ ಮುಖ ಬೆಲೆಯ 5 ಲಕ್ಷ ವಶ ರೂ. ಸಾಗರದಿಂದ ಹೊನ್ನಾವರ ಕಡೆಗೆ ಕಾರಿನಲ್ಲಿ ಸಾಗಿಸುತ್ತಿದ್ದೆನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಹೊನ್ನಾವರ ಪೊಲೀಸರು ಕಾರ್ಯಾಚರಣೆ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





