ಸಾರಿಗೆ ಬಸ್ ಗಳ ನಡುವೆ ಅಪಘಾತ, ಓರ್ವ ವ್ಯಕ್ತಿ ಮೃತ್ಯು

ಶಿರಸಿ, ಡಿ.7: ಸಾರಿಗೆ ಸಂಸ್ಥೆಯ ಬಸ್ ಗಳ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಿದ್ದಾಪುರ ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬೆಂಗಳೂರಿನಿಂದ ಶಿರಸಿಗೆ ಹಾಗೂ ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ಈ ಘಟನೆಯಲ್ಲಿ ಏಳು ಜನರಿಗೆ ಗಂಭೀರ ಗಾಯಗೊಂಡಿದ್ದು, ಶಿರಸಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story





