Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡ್ಡಿ ದರ ಕಡಿತ ಇಲ್ಲ : ಆರ್‌ಬಿಐ...

ಬಡ್ಡಿ ದರ ಕಡಿತ ಇಲ್ಲ : ಆರ್‌ಬಿಐ ಅಚ್ಚರಿಯ ನಡೆ

ವಾರ್ತಾಭಾರತಿವಾರ್ತಾಭಾರತಿ7 Dec 2016 7:26 PM IST
share
ಬಡ್ಡಿ ದರ ಕಡಿತ ಇಲ್ಲ : ಆರ್‌ಬಿಐ ಅಚ್ಚರಿಯ ನಡೆ

 ಮುಂಬೈ, ಡಿ.7: ನೋಟು ಅಮಾನ್ಯದ ಬಳಿಕ ಆರ್ಥಿಕ ಚಟುವಟಿಕೆಗಳಲ್ಲಿ ಅಲ್ಪಾವಧಿಯ ತಡೆ ಮತ್ತು ಜಿಡಿಪಿ ಅಭಿವೃದ್ಧಿ ದರವನ್ನು ಶೇ.7.1ಕ್ಕೆ ಇಳಿಸಿದ ಬಳಿಕವೂ ಅಲ್ಪಾವಧಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಅವರ ನಿರ್ಧಾರ ಮಾರುಕಟ್ಟೆಯನ್ನು ಅಚ್ಚರಿಯಲ್ಲಿ ಕೆಡವಿದೆ.
   
ಆರು ಮಂದಿ ಸದಸ್ಯರನ್ನು ಹೊಂದಿರುವ ಹಣಕಾಸು ನೀತಿ ಸಮಿತಿಯು ನಿರೀಕ್ಷೆಗಳನ್ನು ಹುಸಿಗೊಳಿಸಿ ರೆಪೋ ದರದಲ್ಲಿ ಬದಲಾವಣೆ ಮಾಡದೆ ಈಗಿರುವ ಶೇ. 6.25ಕ್ಕೇ ನಿಗದಿಗೊಳಿಸಿತು. ಕಳೆದ ಅಕ್ಟೋಬರ್‌ನಲ್ಲಿ ಈ ಸಮಿತಿ ನಡೆಸಿದ ಪ್ರಥಮ ಪರಾಮರ್ಶೆ ಸಭೆಯಲ್ಲಿ ಬಡ್ಡಿದರವನ್ನು ಶೇ.0.25ರಷ್ಟು ಕಡಿತಗೊಳಿಸಿತ್ತು. ನೋಟು ಅಮಾನ್ಯಗೊಳಿಸಿದ ಬಳಿಕ ಆರ್ಥಿಕ ಚಟುವಟಿಕೆಗಳಿಗೆ ತಡೆ ಉಂಟಾದ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಜಿಡಿಪಿ ದರವನ್ನು ಶೇ.7.1 ಎಂದು ಅಂದಾಜಿಸಿತ್ತು.

2016-17ರ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಹಣದುಬ್ಬರ ಪ್ರಮಾಣವನ್ನು ಶೇ.5 ಎಂದು ಅಂದಾಜಿಸಲಾಗಿದೆ. 7ನೇ ವೇತನ ಆಯೋಗವು ನೀಡಿರುವ ಮನೆ ಬಾಡಿಗೆ ಭತ್ಯೆಯ ಪೂರ್ಣ ಪರಿಣಾಮವನ್ನು ಇನ್ನಷ್ಟೇ ನಿಗದಿಪಡಿಸಬೇಕಿರುವ ಕಾರಣ ಹಣದುಬ್ಬರ ಪ್ರಮಾಣವನ್ನು ಅಂದಾಜಿಸುವ ಸಂದರ್ಭ ಪರಿಗಣಿಸಲಾಗಿಲ್ಲ. ಅಧಿಕ ವೌಲ್ಯದ ನೋಟುಗಳ ರದ್ದತಿಯಿಂದ ನವೆಂಬರ್- ಡಿಸೆಂಬರ್ ತಿಂಗಳ ಸಂಬಳ ಪಾವತಿ ಪ್ರಕ್ರಿಯೆಯನ್ನು ವಿಳಂಬಗೊಳಿಸುವ ಕಾರಣ ಆರ್ಥಿಕ ಚಟುವಟಿಕೆಗಳಿಗೆ ತಡೆ ಉಂಟಾಗಬಹುದು. ನಿರ್ಮಾಣ ಕಾಮಗಾರಿ, ವ್ಯಾಪಾರ, ಸಾರಿಗೆ, ಹೋಟೆಲ್ ಮತ್ತು ಮಾಹಿತಿ ಕ್ಷೇತ್ರಗಳ ಮೇಲೆ ತಾತ್ಕಾಲಿಕ ಪರಿಣಾಮ ಬೀರಲಿದೆ. 7 ನೇ ವೇತನ ಆಯೋಗದ ಶಿಫಾರಸು ಮತ್ತು ‘ಏಕ ಶ್ರೇಣಿ ಏಕ ಪಿಂಚಣಿ’ ಯೋಜನೆಯ ಕಾರಣ ಸಾರ್ವಜನಿಕ ಆಡಳಿತ, ರಕ್ಷಣೆ ಮತ್ತಿತರ ಸೇವಾ ಕಾರ್ಯಗಳ ಮೇಲೆ ನೋಟು ರದ್ದತಿಯಿಂದ ಹೆಚ್ಚಿನ ಪರಿಣಾಮ ಆಗದು ಎಂದು ತಿಳಿಸಿದೆ.


14.5 ಲಕ್ಷ ಕೋಟಿಯಷ್ಟು ಹಳೆ ನೋಟುಗಳನ್ನು ರದ್ದುಪಡಿಸಲಾಗಿದ್ದು ಇದರಲ್ಲಿ 12 ಲಕ್ಷ ಕೋಟಿಯಷ್ಟು ಮೊತ್ತವನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ನೋಟು ಅಮಾನ್ಯಗೊಳಿಸಿದ ಬಳಿಕ ಬ್ಯಾಂಕ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಠೇವಣಿಗಳು ಹರಿದು ಬರುತ್ತಿರುವ ಕಾರಣ ಶೇ.100 ನಗದು ಮೀಸಲು ಅನುಪಾತ (ಸಿಆರ್‌ಆರ್) ಅನ್ನು ಡಿ.10ರಿಂದ ಹಿಂಪಡೆಯಲು ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಅಮೆರಿಕಾದಲ್ಲಿ ಆರ್ಥಿಕ ಕಾರ್ಯನೀತಿಯನ್ನು ಬಿಗುಗೊಳಿಸುವ ಸಮಯ ಸನ್ನಿಹಿತವಾಗಿರುವ ಕಾರಣ ಆರ್ಥಿಕ ಮಾರುಕಟ್ಟೆಯಲ್ಲಿ ಭಾರೀ ಚಂಚಲತೆ ನಿರೀಕ್ಷಿಸಲಾಗಿದೆ. ಇದರಿಂದ ಅಭಿವೃದ್ಧಿ ಹೊಂದುತ್ತಿರುವ ಮರುಕಟ್ಟೆಗಳ ಮೇಲೆ ಭಾರೀ ಆರ್ಥಿಕ ತೊಡಕು ಉಂಟಾಗುವ ಸಾಧ್ಯತೆಯಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.


 
ಆದ್ದರಿಂದ ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ಮತ್ತು ಮಾರುಕಟ್ಟೆ ಪರಿಣಾಮಗಳನ್ನು ಕಾಯ್ದು ನೋಡುವ ಉದ್ದೇಶದಿಂದ ಬಡ್ಡಿ ದರವನ್ನು ಯಥಾಪ್ರಕಾರ ಉಳಿಸಿಕೊಳ್ಳಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X