ಝೆನಿತ್ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ದಂತ ಚಿಕಿತ್ಸೆ

ಮುಡಿಪು, ಡಿ.8: ಇಂದಿನ ವಿದ್ಯಾರ್ಥಿ ಸಮೂಹವೇ ರಾಷ್ಟ್ರದ ಸಂಪತ್ತಾಗಿದ್ದು ಅವರ ಆರೋಗ್ಯವೇ ಭಾರತದ ಭದ್ರ ಬುನಾದಿಯಾಗಿದೆ. ಅವರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಉಚಿತ ವೈದ್ಯಕೀಯ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಝೆನಿತ್ ಶಾಲೆಯ ಕಾರ್ಯ ವೈಖರಿ ಶ್ಲಾಘನೀಯ ಎಂದು ಯೇನೆಪೋಯ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ.ಶ್ಯಾಂ ಎಸ್.ಭಟ್ ಹೇಳಿದರು.
ಅವರು ಝೆನಿತ್ ಶಾಲೆಯಲ್ಲಿ ಏರ್ಪಡಿಸಿದ ಉಚಿತ ವೈದ್ಯಕೀಯ ಶಿಬಿರ ಮತ್ತು ದಂತ ಚಿಕಿತ್ಸೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಯೇನೆಪೋಯ ವಿಶ್ವವಿದ್ಯಾನಿಲಯದ ದಂತ ಶಾಸ್ತ್ರದ ಮುಖ್ಯ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಣೈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಝೆನಿತ್ ಶಾಲೆ ಮುಡಿಪು ಹಾಗೂ ಯೇನೆಪೋಯ ವಿಶ್ವವಿದ್ಯಾನಿಲಯ ಜಂಟಿಯಾಗಿ ನಡೆಸಿದ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸೆಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಝೆನಿತ್ ಶಾಲೆಯ ಅಧ್ಯಕ್ಷ ಮಜೀದ್, ಎಂ.ಸಂಚಾಲಕಿ ನಹಾದ ಮಜೀದ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.







