Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಸ್ಬಾ ಬೆಂಗ್ರೆ: ಸಮಾಜ ಸೇವಾ ಘಟಕದಿಂದ...

ಕಸ್ಬಾ ಬೆಂಗ್ರೆ: ಸಮಾಜ ಸೇವಾ ಘಟಕದಿಂದ ರಕ್ತದಾನ ಶಿಬಿರ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Dec 2016 11:02 AM IST
share
ಕಸ್ಬಾ ಬೆಂಗ್ರೆ: ಸಮಾಜ ಸೇವಾ ಘಟಕದಿಂದ ರಕ್ತದಾನ ಶಿಬಿರ, ಸನ್ಮಾನ ಕಾರ್ಯಕ್ರಮ

ಮಂಗಳೂರು, ಡಿ.8: ಜಮಾಅತೆ ಇಸ್ಲಾಮೀ ಹಿಂದ್, ಸಮಾಜ ಸೇವಾ ಘಟಕದ ಕಸ್ಬಾ ಬೆಂಗ್ರೆ ಶಾಖೆಯ ವತಿಯಿಂದ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ  ಬೆಂಗ್ರೆಯ ಏ.ಆರ್.ಕೆ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸೋನಾಲಿ ಸಿಂಗ್, ಓರ್ವ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಿದರೆ, ಆತನ ಮೂಲಕ ಮೂವರಿಗೆ ಜೀವದಾನ ಮಾಡಬಹುದು. ಇದರಿಂದಾಗಿ ರಕ್ತದಾನಿಯು ಕೂಡ ಆರೋಗ್ಯವಂತನಾಗಿರುವುದಲ್ಲದೆ, ರಕ್ತ ಪಡೆದ ವ್ಯಕ್ತಿಯ ಜೀವವನ್ನು ಕಾಪಾಡಿದಂತಾಗುತ್ತದೆ. ರಕ್ತದಾನವು ಇಂದು ಅವಶ್ಯಕವಾಗಿದ್ದು, ರಕ್ತದ ಕೊರತೆಯಿಂದ ಹಲವಾರು ಮಂದಿ ಜೀವ ಕಳೆದುಕೊಳ್ಳುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ರಕ್ತದ ಕೊರತೆಯನ್ನು ನೀಗಿಸಬೇಕಾದರೆ ಪ್ರತಿಯೋರ್ವರೂ ರಕ್ತದಾನದ ಮಹತ್ವವನ್ನು ಅರಿತುಕೊಂಡು ರಕ್ತದಾನ ಶಿಬಿರ ಅಥವಾ ಆಸ್ಪತ್ರೆಗಳ ಬ್ಲಡ್ ಬ್ಯಾಂಕ್ ಭೇಟಿ ನೀಡಿ, ಮೂರು ತಿಂಗಳಿಗೊಮ್ಮೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವಂತೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ. ಸಮಾಜ ಸೇವಾ ಘಟಕದಂತಹಾ ಹಲವಾರು ಸಂಘಸಂಸ್ಥೆಗಳೊಂದಿಗೆ ಕೆಎಂಸಿ ಆಸ್ಪತ್ರೆಯು 24*7 ಕಾರ್ಯ ನಿರ್ವಹಿಸಲು ಸದಾ ಮುಂದಾಗಿರುತ್ತದೆ ಎಂದರು.

ಸನ್ಮಾನ: ಇದೇ ವೇಳೆ ಕಳೆದ 10-15 ವರುಷಗಳಿಂದ 50ಕ್ಕೂ ಹೆಚ್ಚು ಜೀವರಕ್ಷಣೆ ಮಾಡಿ, ಜಲದುರಂತದ ಸಂದರ್ಭ 150ಕ್ಕೂ ಅಧಿಕ ಶವಗಳನ್ನು ಪತ್ತೆಹಚ್ಚಿ ನಿಸ್ವಾರ್ಥ ಸೇವೆ ಮಾಡುತ್ತಿರುವ, ತಣ್ಣೀರುಬಾವಿಯ ಜೀವ ರಕ್ಷಕರೆಂದೇ ಖ್ಯಾತಿ ಪಡೆದಿರುವ ಯೂತ್ ಸ್ಫೋಟ್ಸ್ ಕ್ಲಬ್ ನ ಐವರು ಸದಸ್ಯರಾದ ಮುಹಮ್ಮದ್ ವಾಸಿಂ, ಸಾದಿಕ್, ಜಾವಿದ್, ಝಾಕೀರ್ ಹುಸೈನ್ ಹಾಗೂ ಹಸನ್ ಟಿ.ಪಿ. ಮತ್ತು ಅತಿಹೆಚ್ಚು ಬಾರಿ ರಕ್ತದಾನ ಮಾಡುತ್ತಾ ತಮ್ಮದೇ ರೀತಿಯಲ್ಲಿ ಸಮಾಜ ಸೇವೆಗೈಯುತ್ತಿರುವ ಕಸ್ಬಾ ಬೆಂಗ್ರೆ ನಿವಾಸಿಗಳಾದ ನಝೀರ್ ಅಹ್ಮದ್ ಹಾಗೂ ಮುಹಮ್ಮದ್ ಅಸ್ಲಂರಿಗೆ ಸಮಾಜ ಸೇವಾ ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಾ ಘಟಕದ ಮುಹ್ಸಿನ್ ಕಂದಕ್ ವಹಿಸಿದ್ದರು. ಈ ಸಂದರ್ಭ ಬೆಂಗ್ರೆ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಹಮೀದ್, ವೆಲ್ಫೇರ್ ಪಾರ್ಟಿಯ ಕರ್ನಾಟಕ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲ್ಯಾನ್, ಎಸ್ ಡಿಪಿಐ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಮುಹಮ್ಮದ್ ಮುನೀಬ್, ಡಿವೈಎಫ್ ಐ ಬೆಂಗ್ರೆ ಅಧ್ಯಕ್ಷ ಮುಹಮ್ಮದ್ ನೌಶಾದ್, ಕರೀಂ ಬೆಂಗ್ರೆ, ಇಸ್ಮಾಯೀಲ್ ಉಸ್ತಾದ್ ಕೆ.ಪಿ. ಮತ್ತಿತರರು ಉಪಸ್ಥಿತರಿದ್ದರು. 

ಮೌಲಾನ ಮುಹಮ್ಮದ್ ಶುಕ್ರುದ್ದೀನ್ ಕಿರಾಅತ್ ಪಠಿಸಿದರು. ಇರ್ಷಾದ್ ವೇಣೂರ್ ನಿರೂಪಿಸಿದರು.   


  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X