ಮೋಂಟುಗೋಳಿ-ಸೈಟ್ ರಸ್ತೆಗೆ ಸಚಿವ ಖಾದರ್ ಶಿಲಾನ್ಯಾಸ

ಕೊಣಾಜೆ, ಡಿ.8: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ವ್ಯವಸ್ಥೆಯು ಚೆನ್ನಾಗಿದ್ದರೆ ಮಾತ್ರ ಆ ಪ್ರದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಸರಾಗವಾಗಿ ನಡೆಯಲು ಸಾಧ್ಯ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕವಾದ ಕುಡಿಯುವ ನೀರು, ವ್ಯವಸ್ಥಿತವಾದ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಯು.ಟಿ.ಖಾದರ್ ಅವರು ಅಭಿಪ್ರಾಯ ಪಟ್ಟರು.
ಅವರು ಕೈರಂಗಳ ಗ್ರಾಮದ ಮೋಂಟುಗೋಳಿ-ಸೈಟ್ ನೂತನ ರಸ್ತೆಗೆ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.
ಮೋಂಟುಗೋಳಿ ಸೈಟ್ ಪ್ರದೇಶದಲ್ಲಿ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೆ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಭಾಗದ ಜನಪ್ರತಿನಿಧಿಗಳ ಸಹಕಾರದೊಂದಿಗೆ ಹಾಗೂ ಜನರ ಸಹಭಾಗಿತ್ವದೊಂದಿಗೆ ಆದಷ್ಟು ಶೀಘ್ರದಲ್ಲಿ ಮಾದರಿ ರಸ್ತೆ ನಿರ್ಮಾಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಹೈದರ್ ಕೈರಂಗಳ, ನರಿಂಗಾನ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಪಂಚಾಯಿತಿ ಸದಸ್ಯರಾದ ಆತಿಕಾ, ಅಸ್ಮಾ, ಸಿ.ಎಂ.ಶೆರೀಫ್ ಚೆಂಬೆತೋಟ, ನಾಸೀರ್ ನಡುಪದವು, ಇಬ್ರಾಹಿಂ ಹಾಜಿ ನಡುಪದವು, ಸ್ಥಳೀಯರಾದ ದೇವಕಿ, ಕಲ್ಯಾಣಿ, ಗೋಪಾಲ ಬಂಗೇರ, ಅಬ್ಬಾಸ್ ಮೋಂಟುಗೋಳಿ, ಮೂಸೆಕುಂಞಿ, ಹಮೀದ್ ಪಟ್ಟೋರಿ ಮುಂತಾದವರು ಉಪಸ್ಥಿತರಿದ್ದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹೈದರ್ ಕೈರಂಗಳ ವಂದಿಸಿದರು.







