Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಗೂಢ 'ಮುಂಬೈ ಡೈರಿ 'ಗಾಗಿ...

ನಿಗೂಢ 'ಮುಂಬೈ ಡೈರಿ 'ಗಾಗಿ ಪರದಾಡುತ್ತಿರುವ ಐಟಿ ಅಧಿಕಾರಿಗಳು

13,860 ಕೋ.ರೂ.ಕಪ್ಪುಹಣ ಘೋಷಣೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ8 Dec 2016 4:33 PM IST
share
ನಿಗೂಢ ಮುಂಬೈ ಡೈರಿ ಗಾಗಿ ಪರದಾಡುತ್ತಿರುವ ಐಟಿ ಅಧಿಕಾರಿಗಳು

ಅಹ್ಮದಾಬಾದ್,ಡಿ.8:ನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ ಶಾ ಆದಾಯ ಬಹಿರಂಗ ಯೋಜನೆಯಡಿ 13,860 ಕೋ.ರೂ.ಗಳ ಕಪ್ಪುಹಣವನ್ನು ಘೋಷಿಸಿದ್ದ ಪ್ರಕರಣವೀಗ ನಿಗೂಢ 'ಮುಂಬೈ ಡೈರಿ' ಸುತ್ತ ಗಿರಕಿ ಹೊಡೆಯುತ್ತಿದೆ. ಶಾ ಈ ಡೈರಿಯ ನ್ನು ಉಲ್ಲೇಖಿಸುತ್ತಿದ್ದಾನಾದರೂ ಅದನ್ನು ಎಲ್ಲಿ ಪತ್ತೆ ಹಚ್ಚಬಹುದು ಎಂಬ ಬಗ್ಗೆ ಯಾವುದೇ ಖಚಿತವಾದ ಸುಳಿವುಗಳನ್ನು ನೀಡುತ್ತಿಲ್ಲ. ಹೀಗಾಗಿ ಶಾ ಹೇಳುವಂತೆ ತನ್ನ ಕಪ್ಪುಹಣ ಘೋಷಣೆಯ ಹಿಂದಿರುವ ವ್ಯಕ್ತಿಗಳ ಹೆಸರುಗಳಿರುವ ಆ ಡೈರಿಯನ್ನು ವಶಕ್ಕೆ ತೆಗೆದು ಕೊಳ್ಳಲು ಆದಾಯ ತೆರಿಗೆ ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ.

ತನ್ನನ್ನು ಮುಖವಾಡವನ್ನಾಗಿ ಮಾಡಿಕೊಂಡಿರುವವರಲ್ಲಿ ಹಲವಾರು ದೊಡ್ಡ ವ್ಯಕ್ತಿಗಳಿದ್ದಾರೆಂದು ಶಾ ತಿಳಿಸಿದ್ದಾನಾದರೂ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯಲ್ಲಿ ಆತ ಈವರೆಗೂ ಈ ಹೆಸರುಗಳನ್ನು ಬಾಯಿಬಿಟ್ಟಿಲ್ಲ.

ಶಾಗೆ ಕಮಿಷನ್ ಮತ್ತು ಆತನ ಟ್ರಸ್ಟ್‌ಗಳ ಸ್ಥಾಪನೆಗೆ ಹಣವನ್ನು ನೀಡುವುದಾಗಿ ಭರವಸೆ ನೀಡಿದ್ದರೆನ್ನಲಾದ ವ್ಯಕ್ತಿಗಳನ್ನು ಹೆಸರಿಸುವಂತೆ ಆದಾಯ ತೆರಿಗೆ ಅಧಿಕಾರಿಗಳು ಸೂಚಿಸಿದಾಗ,ಆ ವಿವರಗಳೆಲ್ಲ ಮುಂಬೈನಲ್ಲಿರುವ ಡೈರಿಯಲ್ಲಿ ಇವೆ ಎಂದು ಆತ ತಿಳಿಸಿದ್ದ. ಹೋಗಲಿ,ಅವರ ಸಂಪರ್ಕ ವಿವರಗಳನ್ನಾದರೂ ನೀಡು ಎಂದು ಕೇಳಿದರೆ ಅವೂ ಅದೇ ಡೈರಿಯಲ್ಲಿವೆ ಎಂದು ಶಾ ಉತ್ತರಿಸಿದ್ದಾನೆ.

ಶಾ ಠಾಣೆ ಸಮೀಪದ ಡೊಂಬಿವಲಿಯಲ್ಲಿ ತನ್ನ ಕಚೇರಿಗಳನ್ನು ಹೊಂದಿದ್ದು, ತನ್ನ ಅಕ್ರಮ ವಹಿವಾಟುಗಳ ದಾಖಲೆಗಳನ್ನು ಅಲ್ಲಿಟ್ಟಿದ್ದಾನೆ ಎಂದು ಮೂಲಗಳು ಹೇಳಿವೆ. ಆದರೆ ಪ್ರಮುಖವಾದ ಡೈರಿಯನ್ನು ಪಡೆಯಲು ಆದಾಯ ತೆರಿಗೆ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ.

ಅಹ್ಮದಾಬಾದ್‌ನಲ್ಲಿರುವ ಶಾ ನಿವಾಸದಿಂದ ಒಂದು ಹಾರ್ಡ್ ಡಿಸ್ಕ್ ಮತ್ತು ಒಂದು ಡೈರಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವರಾದರೂ ಅದರಲ್ಲಿಯ ಮಾಹಿತಿಗಳು ಪ್ರಕರಣವನ್ನು ಭೇದಿಸುವಲ್ಲಿ ನೆರವಾಗಿಲ್ಲ. ಹೀಗಾಗಿ ಮುಂಬೈ ಡೈರಿಯನ್ನು ಪತ್ತೆ ಹಚ್ಚುವುದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಪಾಲಿಗೆ ಭಾರೀ ತಲೆನೋವಾಗಿರುವ ಈ ಪ್ರಕರಣವನ್ನು ಭೇದಿಸಲು ನಿರ್ಣಾಯಕವಾಗಿದೆ.

ಗುಜರಾತ್,ಮುಂಬೈ,ಕರ್ನಾಟಕ ಮತ್ತು ಪುಣೆಯಲ್ಲಿ ತನ್ನ ಉದ್ಯಮಾಸಕ್ತಿಗಳನ್ನು ಹೊಂದಿರುವ ಶಾ ಆದಾಯ ಬಹಿರಂಗ ಯೋಜನೆಯ ಕೊನೆಯ ದಿನವಾಗಿದ್ದ ಸೆ.30ರಂದು ತನ್ನ ಬಳಿ 13,860 ಕೋ.ರೂ.ಕಪ್ಪುಹಣವಿದೆ ಎಂದು ಘೋಷಿಸಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X