ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಪುನರಾಯ್ಕೆ

ಬೆಂಗಳೂರು, ಡಿ.9: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಪುನರಾಯ್ಕೆಗೊಂಡಿದ್ದಾರೆ.
ಇಂದು ಜೆಡಿಎಸ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಉಪಸ್ಥಿತಿಯಲ್ಲಿ ಕುಮಾರ ಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಘೋಷಿಸಿದರು.
ಇಂದು ನಿಗದಿಯಾಗಿದ್ದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ಡಿ.ಕುಮಾರಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದರೆ ಕುಮಾರಸ್ವಾಮಿ ಮಾತ್ರ ಕಾರ್ಯಕಾರಿ ಸಮಿತಿ ಸಭೆಗೆ ಗೈರು ಹಾಜರಾಗಿದ್ದರು.
Next Story





