Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ವಿಫಲವಾದರೆ ನಾನೇ ಹೊಣೆ...

ನೋಟು ರದ್ದತಿ ವಿಫಲವಾದರೆ ನಾನೇ ಹೊಣೆ ಎಂದಿದ್ದರು ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ9 Dec 2016 2:20 PM IST
share
ನೋಟು ರದ್ದತಿ ವಿಫಲವಾದರೆ ನಾನೇ ಹೊಣೆ ಎಂದಿದ್ದರು ಪ್ರಧಾನಿ ಮೋದಿ

ಹೊಸದಿಲ್ಲಿ, ಡಿ.9: ನವೆಂಬರ್ 8ರ ರಾತ್ರಿ ಪ್ರಧಾನಿ ನರೇಂದ್ರ ಮೋದಿ 500 ಹಾಗೂ 1000 ರೂಪಾಯಿ ನೋಟುಗಳನ್ನು ಮಧ್ಯರಾತ್ರಿಯಿಂದಲೇ ನಿಷೇಧಿಸಲಾಗುವುದು ಎಂದು ಘೋಷಿಸಿದಾಗ ಅರೆ ಕ್ಷಣ ಇಡೀ ದೇಶವೇ ದಂಗಾಗಿ ಹೋಗಿತ್ತು. ಅದೊಂದು ಅಭೂತಪೂರ್ವ ನಿರ್ಧಾರವೆಂದು ಸರಕಾರ ಹೇಳಿಕೊಂಡರೆ ವಿಪಕ್ಷಗಳು ಸರಕಾರದ ಕ್ರಮದ ವಿರುದ್ಧ ಕಿಡಿ ಕಾರಿದ್ದವು. ಮರು ದಿನ ಬ್ಯಾಂಕು ಹಾಗೂ ಎಟಿಎಂಗಳ ಮುಂದೆ ಜನರು ತಮ್ಮಲ್ಲಿರುವ ಹಳೆ ನೋಟುಗಳನ್ನು ವಿನಿಮಯ ಮಾಡಲು ಯಾ ಠೇವಣಿಯಿಡಲು ಬ್ಯಾಂಕುಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಲು ಆರಂಭಿಸಿದ್ದರು. ಹಲವೆಡೆ ಗೊಂದಲಕಾರಿ ವಾತಾವರಣ ನಿರ್ಮಾಣವಾಗಿತ್ತು ಹಾಗೂ ಅದು ಈಗಲೂ ಮುಂದುವರಿದಿದೆ.

ಇಂತಹ ಒಂದು ಮಹತ್ವದ ನಿರ್ಧಾರ ಕೈಗೊಳ್ಳಲು ಮೋದಿ ತಮ್ಮ ಜನಪ್ರಿಯತೆಯನ್ನೂ ಪಣವಾಗಿಟ್ಟಿದ್ದರು. ``ನಾನು ಎಲ್ಲಾ ರೀತಿಯಲ್ಲೂ ಅಧ್ಯಯನ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದೇನೆ. ಇದು ವಿಫಲವಾದರೆ ಅದಕ್ಕೆ ನಾನೇ ಜವಾಬ್ದಾರ'' ಎಂದು ಪ್ರಧಾನಿ ನವೆಂಬರ್ 8ರಂದು ತಾವು ನೋಟು ಅಮಾನ್ಯ ಘೋಷಣೆ ಮಾಡುವುದಕ್ಕಿಂತ ಸ್ವಲ್ಪವೇ ಮುಂಚಿತವಾಗಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದರೆಂದು ಆ ಸಭೆಯಲ್ಲಿ ಭಾಗವಹಿಸಿದ್ದ ಮೂವರು ಸಚಿವರು ಬಹಿರಂಗ ಪಡಿಸಿದ್ದಾರೆ.

ಈ ಪ್ರಮುಖ ನಿರ್ಧಾರ ಕೈಗೊಳ್ಳುವ ಸಲುವಾಗಿ ಅವರು  ಭಾರೀ ವಿರೋಧ ಎದುರಿಸಬೇಕಾದಂತಹ ಸಂದರ್ಭದಲ್ಲಿಯೂ  ಕ್ಷಿಪ್ರ ನಿರ್ಧಾರ ಕೈಗೊಂಡಿದ್ದರೆಂಬುದು ತಿಳಿದು ಬರುತ್ತದೆ.

ಪ್ರಧಾನಿ ನಿವಾಸದಲ್ಲಿ ತಂಗಿದ್ದ ವಿತ್ತ ಸಚಿವಾಲಯದ ಹಿರಿಯ ಅಧಿಕಾರಿ ಹಸ್ಮುಖ್ ಅಧಿಯಾ ನೇತೃತ್ವದ  ಆರು ಮಂದಿಯ ತಂಡವೊಂದರ ಸಹಾಯದಿಂದ ಪ್ರಧಾನಿ ಈ ಇಡೀ ಕಾರ್ಯಯೋಜನೆಯನ್ನು ಸಿದ್ಧಪಡಿಸಿದ್ದಾರೆಂದು ಸುದ್ದಿ ಸಂಸ್ಥೆ ರೂಟರ್ಸ್ ವರದಿ ಮಾಡಿದೆ.

ಮೋದಿ 2003-06 ನಡುವೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ 58 ವರ್ಷದ ಈ ಅಧಿಕಾರಿ ಅವರಿಗೆ ಮುಖ್ಯ ಕಾರ್ಯದರ್ಶಿಯಾಗಿದ್ದರಲ್ಲದೆ ಈ ಅಧಿಕಾರಿಯೇ ಮೋದಿಗೆ ಯೋಗವನ್ನು ಪರಿಚಯಿಸಿದವರು ಎಂದು ತಿಳಿದು ಬಂದಿದೆ. ಮೋದಿ ಹಾಗೂ ಅಧಿಯಾ ನಡುವೆ ಪರಸ್ಪರ ನಂಬಿಕೆ ಹಾಗೂ ವಿಶ್ವಾಸವಿತ್ತು ಎಂದೂ ಹೇಳಲಾಗಿದೆ. ಅವರಿಬ್ಬರ ನಡುವೆ ಆಗಾಗ ನೇರ ಫೋನ್ ಸಂಪರ್ಕ ಕೂಡ ಇತ್ತೆನ್ನಲಾಗಿದ್ದು ಸಮಯ ಸಿಕ್ಕಾಗಲೆಲ್ಲಾ  ಅವರಿಬ್ಬರೂ  ವಿವಿಧ ವಿಚಾರಗಳ ಬಗ್ಗೆ ಗುಜರಾತಿಯಲ್ಲಿ ಸುದೀರ್ಘ ಸಂಭಾಷಣೆ ಮಾಡುತ್ತಿದ್ದರೆಂದು ವರದಿಯಾಗಿದೆ.
 
ನೋಟು ಅಮಾನ್ಯ ಯೋಜನೆ ಸಿದ್ಧ ಪಡಿಸಿದ್ದ ಅಧಿಯಾ ನೇತೃತ್ವದ ತಂಡಕ್ಕೆ ಎಲ್ಲಾ ವಿಚಾರಗಳಲ್ಲಿಯೂ ಅತ್ಯಂತ ಗೌಪ್ಯತೆಯನ್ನು ಕಾಯ್ದುಕೊಂಡು ಬರುವಂತೆ ಹೇಳಲಾಗಿತ್ತು. ಮೋದಿ ನಿವಾಸದಲ್ಲಿನ ಎರಡು  ಕೊಠಡಿಗಳಲ್ಲಿದ್ದ ಯುವ ಸಂಶೋಧಕರ ತಂಡವೊಂದು  ಅಧಿಯಾ ನೇತೃತ್ವದ ತಂಡಕ್ಕೆ ಸೂಕ್ತ ಸಹಾಯ ಮಾಡುತ್ತಿತ್ತೆನ್ನಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X