Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ನಿಯ ಅಪಹರಣ ಆರೋಪ: ಪೊಲೀಸರ...

ಪತ್ನಿಯ ಅಪಹರಣ ಆರೋಪ: ಪೊಲೀಸರ ‘ಬಿ’ರಿಪೋರ್ಟ್ ತಿರಸ್ಕೃತ

ಪ್ರಕರಣ ದಾಖಲಿಸಿಕೊಳ್ಳಲು ನ್ಯಾಯಾಲಯ ಪೊಲೀಸರಿಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ9 Dec 2016 6:35 PM IST
share
ಪತ್ನಿಯ ಅಪಹರಣ ಆರೋಪ: ಪೊಲೀಸರ ‘ಬಿ’ರಿಪೋರ್ಟ್ ತಿರಸ್ಕೃತ

ಪುತ್ತೂರು, ಡಿ.9 : ಕಳೆದ ಎರಡು ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದಿದ್ದ ಛಾಯಾಗ್ರಾಹಕರೊಬ್ಬರ ಪತ್ನಿಯ ನಾಪತ್ತೆ ಪ್ರಕರಣ ದೂರಿಗೆ ಸಂಬಂಧಿಸಿ ಆರೋಪ ದಾಖಲಿಸಿಕೊಂಡಿರುವ ಪುತ್ತೂರು ನಗರ ಪೊಲೀಸರು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದು, ಈ ಕುರಿತು ಪತಿ ಸಲ್ಲಿಸಲಾಗಿದ್ದ ಆಕ್ಷೇಪಣೆಯ ಕುರಿತು ವಿಚಾರಣೆ ನಡೆಸಿದ ಪುತ್ತೂರು ಎಸಿಜೆಎಂ ನ್ಯಾಯಾಲಯ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್‌ನ್ನು ತಿರಸ್ಕರಿಸಿ, ಆಕೆಯನ್ನು ಅಪಹರಿಸಿರುವ ಆರೋಪಿಗಳಿಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳುವಂತೆ ಆದೇಶ ನೀಡಿದೆ.

   ಪುತ್ತೂರು ನಗರದ ಸಾಮೆತ್ತಡ್ಕದ ಗಿರೀಶ್ ಕಂಪೌಂಡ್ ನಿವಾಸಿ, ಪುತ್ತೂರಿನ ಸ್ಟುಡಿಯೋ ಒಂದರ ಮಾಲಕರಾಗಿದ್ದ ಛಾಯಾಚಿತ್ರಗ್ರಾಹಕ ಗಿರಿಧರ್ ಭಟ್ ಅವರ ಪತ್ನಿ ಕೀರ್ತಿಕಾ ಅವರು ಸೆ.11, 2014ರಂದು ನಾಪತ್ತೆಯಾಗಿದ್ದರು. ಆಕೆಯನ್ನು ಅಪಹರಿಸಿದ್ದ ಆರೋಪ ಹೊಂದಿದ್ದ ಬೆಂಗಳೂರು ಮೂಲದ ಡೆನ್ಸಸ್ ಡೆವಿಸ್ ಮತ್ತು ಆತನಿಗೆ ಸಹಕರಿಸಿದ ಬೆಂಗಳೂರಿನ ಸಂತೋಷ್ ಕುಮಾರ್ ವಿರುದ್ದ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.

ತನ್ನ ಪತ್ನಿ ಕೀರ್ತಿಕಾ ಸೆ.11ರಂದು ಕಲ್ಲಾರೆಯಲ್ಲಿರುವ ತನ್ನ ತವರು ಮನೆಯಿಂದ ನಾಪತ್ತೆಯಾಗಿದ್ದು, ಆಕೆಯನ್ನು ಬೈಕುಗಳಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋಗಿದ್ದಾರೆಂದು ಗಿರಿಧರ ಭಟ್ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು. ಗಿರಿಧರ್ ಭಟ್ ಅವರು ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಪೊಲೀಸರು ಕಲಂ 363 ಹಾಗೂ ಭಾರತೀಯ ದಂಡ ಸಂವಿತೆ ಕಲಂ 34ರಡಿಯಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಕೀರ್ತಿಕಾ ಅವರನ್ನು ಕರೆದುಕೊಂಡು ಹೋಗಿದ್ದ ಬೆಂಗಳೂರು ಮೂಲದ ಡೆನ್ಸ್‌ಸ್ ಡೆವಿಸ್ ಮತ್ತು ಆತನಿಗೆ ಸಹಕರಿಸಿದ ಆರೋಪದ ಮೇಲೆ ಬೆಂಗಳೂರಿನ ಉದಯನಗರ ಬಳಿಯ ಟಿನ್ನಫ್ಯಾಕ್ಟರಿ ಸಮೀಪದ ಮುರುಗನ್ ನಿಲಯದ ಚಂದ್ರಮೂರ್ತಿ ಅವರ ಪುತ್ರ ಸಂತೋಷ್ ಕುಮಾರ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆ ಸಂದರ್ಭದಲ್ಲಿ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿತ್ತು. 

ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೂರ್ಟ್ ಸಲ್ಲಿಸಿದ್ದರು.

ಪೊಲೀಸರ ಬಿ ರಿಪೋರ್ಟ್‌ಗೆ ಆಕ್ಷೇಪ ವ್ಯಕ್ತ ಪಡಿಸಿ ಗಿರಿಧರ್ ಭಟ್ ಅವರು ನ್ಯಾಯಾಲಕ್ಕೆ ಮತ್ತೆ ಮನವಿ ನೀಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಪುತ್ತೂರಿನ ಎಸಿಜೆಎಂ ನ್ಯಾಯಾಲಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಿರುವ ಬಿ.ರಿಪೋರ್ಟ್‌ನ್ನು ತಿರಸ್ಕರಿಸಿ, ಆರೋಪಿಗಳಾದ ಡೆನ್ಸನ್ ಡೇವಿಡ್ ಮತ್ತು ಸಂತೋಷ್ ಕುಮಾರ್ ವಿರುದ್ದ ಕಲಂ 363, 34ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ಘಟನೆಯ ಹಿನ್ನಲೆ

 ಸಾಮೆತ್ತಡ್ಕದ ಗಿರೀಶ್ ಕಂಪೌಂಡ್ ನಿವಾಸಿಯಾದ ಛಾಯಾಚಿತ್ರಗ್ರಾಹಕ ಗಿರಿಧರ ಭಟ್ ಮತ್ತು ಬಿ.ಇ ಪದವೀಧರೆಯಾಗಿದ್ದ ಕೀರ್ತಿಕಾ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ವಿವಾಹವಾದ ಎರಡು ವರ್ಷಗಳ ಬಳಿಕ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೀರ್ತಿಕಾ ಅವರಿಗೆ ಉದ್ಯೋಗ ಲಭಿಸಿತ್ತು. ಈ ಹಿನ್ನಲೆಯಲ್ಲಿ ಗಿರಿಧರ್ ಭಟ್ ಅವರು ಆಕೆಯನ್ನು ಬೆಂಗಳೂರಿನಲ್ಲೇ ಬಿಟ್ಟು ಪುತ್ತೂರಿಗೆ ಮರಳಿದ್ದರು .

ಈ ನಡುವೆ ಆಕೆಗೆ ಅದೇ ಕಂಪೆನಿಯಲ್ಲಿ ದುಡಿಯುತ್ತಿರುವ ಡೆನ್ಸ್‌ನ ಡೇವಿಡ್ ಎಂಬಾತನ ಜೊತೆಗೆ ಪ್ರೇಮಾಂಕುರವಾಗಿತ್ತು. ಈ ಮಾಹಿತಿ ಅರಿತ ಗಿರಿಧರ್ ಭಟ್ ಮತ್ತು ಕೀರ್ತಿಕಾ ಅವರ ಮನೆಯವರು ಬೆಂಗಳೂರಿನಿಂದ ಆಕೆಯನ್ನು ಪುತ್ತೂರಿಗೆ ಕರೆತಂದು ಆಕೆಯ ತವರು ಮನೆಯಲ್ಲೇ ಇರಿಸಿದ್ದರು. ಆದರೆ ಈ ನಡುವೆಯೂ ಡೆನ್ಸ್‌ನ್ ಡೇವಿಡ್‌ನೊಂದಿಗೆ ಸಂಪರ್ಕ ಇರಿಸಿಕೊಂಡಿದ್ದ ಕೀರ್ತಿಕಾ ಅವರು ಪುತ್ತೂರಿನ ಸಾಮತ್ತಡ್ಕದ ಮನೆಯಿಂದ ಆತನೊಂದಿಗೆ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದರು.

ಈ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಡೆನ್ಸ್‌ನ್ ಡೇವಿಡ್ ಪುತ್ತೂರು ನ್ಯಾಯಾಲಯದಿಂದ ಜಮೀನು ಪಡೆದು ಹೊರ ಹೋದ ಬಳಿಕ ನಾಪತ್ತೆಯಾಗಿದ್ದು, ವಾಸ್ತವ್ಯವನ್ನು ಬದಲಾಯಿಸಿಕೊಂಡಿದ್ದನೆಂದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ಆದರೆ ನ್ಯಾಯಾಲಯದ ಆದೇಶದಿಂದಾಗಿ ಇದೀಗ ಮತ್ತೆ ಪ್ರಕರಣ ಜೀವಂತವಾಗಿದೆ . 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X