ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಫಾರೂಕ್

ಬೆಂಗಳೂರು, ಡಿ.9 : ಜಾತ್ಯತೀತ ಜನತಾದಳದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಉದ್ಯಮಿ , ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಂ.ಫಾರೂಕ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ಆಯ್ಕೆಯನ್ನು ಘೋಷಿಸಲಾಗಿದೆ.
ನಂತರ ಮಾತನಾಡಿದ ಬಿ.ಎಂ.ಫಾರೂಕ್ , ನನ್ನ ಮೇಲೆ ಭರವಸೆಯನ್ನಿಟ್ಟು ಈ ಜವಾಬ್ದಾರಿಯನ್ನು ನೀಡಿದ ನಾಯಕರಾದ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಕಾರ್ಯಕರ್ತರಿಗೆ ಆಭಾರಿಯಾಗಿದ್ದೇನೆ. ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ. ರೈತರು, ಮಹಿಳೆಯರು , ವಿದ್ಯಾರ್ಥಿ ಸಮುದಾಯ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ಸರ್ವ ಜನರ ಕಲ್ಯಾಣಕ್ಕೋಸ್ಕರ ಕೆಲಸ ಮಾಡಲಿದ್ದೇನೆ ಎಂದರು.
Next Story





