ಪ್ರವೀಣ್ ಪೂಜಾರಿ ಹತ್ಯೆ: 15 ಮಂದಿಗೆ ಜಾಮೀನು

ಉಡುಪಿ, ಡಿ.9: ಕೆಂಜೂರಿನ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದ 22 ಮಂದಿ ಆರೋಪಿಗಳ ಪೈಕಿ ಹಿಂದು ಜಾಗರಣಾ ವೇದಿಕೆಯ ಮುಖಂಡ ಕುಂಭಾಶಿಯ ಅರವಿಂದ ಕೋಟೇಶ್ವರ(37) ಸೇರಿದಂತೆ 15 ಮಂದಿ ಆರೋಪಿಗಳಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.
ಪ್ರವೀಣ್ ಪೂಜಾರಿ ಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅರವಿಂದ ಕೋಟೇಶ್ವರನನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಇನ್ನು ಏಳು ಮಂದಿ ಆರೋಪಿಗಳಿಗೆ ಜಾಮೀನು ಸಿಗಲು ಬಾಕಿ ಇದೆ. ಆ.17ರಂದು ಪ್ರವೀಣ್ ಪೂಜಾರಿಯನ್ನು ದನ ಸಾಗಾಟ ಮಾಡುತ್ತಿದ್ದ ಕಾರಣಕ್ಕೆ ಅಮಾನುಷವಾಗಿ ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗಳನ್ನು ಆ.18, 19ರಂದು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು.
Next Story





