ನಿಜಲಿಂಗಪ್ಪರವರ 114ನೆ ಜನ್ಮದಿನಾಚರಣೆ
ಬೆಂಗಳೂರು, ಡಿ.10: ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ 114ನೆ ಜನ್ಮದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಪುತ್ಥಳಿಗೆ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಎಂ.ವಿ.ರಾಜಶೇಖರ್ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಅವರು, ನಿಜಲಿಂಗಪ್ಪ ರಾಷ್ಟ್ರ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಿದವರು. ಅದರಲ್ಲೂ ನೀರಾವರಿ, ವಿದ್ಯುತ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅವರು ವಿಶೇಷವಾಗಿ ಕಾಳಜಿ ವಹಿಸಿದ್ದರು ಎಂದು ಸ್ಮರಿಸಿದರು.
Next Story