Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಹೃದಯ ಕಾಯಿಲೆ ಹೆಚ್ಚಳ...

ಭಾರತದಲ್ಲಿ ಹೃದಯ ಕಾಯಿಲೆ ಹೆಚ್ಚಳ ಆತಂಕಕಾರಿ ಬೆಳವಣಿಗೆ : ತಜ್ಞರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ10 Dec 2016 7:14 PM IST
share
ಭಾರತದಲ್ಲಿ ಹೃದಯ ಕಾಯಿಲೆ ಹೆಚ್ಚಳ ಆತಂಕಕಾರಿ ಬೆಳವಣಿಗೆ : ತಜ್ಞರ ಅಭಿಮತ

ಕೊಚ್ಚಿ, ಡಿ.10: ವಿಶ್ವದಾದ್ಯಂತ ಹೃದ್ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರೂ ಭಾರತದಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಹೃದಯರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ನಡೆದ ಕಾರ್ಡಿಯೊಲಜಿಕಲ್ ಸೊಸೈಟಿ ಆಫ್ ಇಂಡಿಯಾ(ಸಿಎಸ್‌ಐ)ದ 68ನೇ ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡ ವಿಶ್ವದ ಐದು ಪ್ರಮುಖ ಹೃದಯರೋಗ ತಜ್ಞರ ಸಂಘದ ಅಧ್ಯಕ್ಷರು , ಭಾರತದಲ್ಲಿ ಹೃದಯರೋಗ ಚಿಕಿತ್ಸಾ ವಿಭಾಗವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ. ಅಮೆರಿಕದ ಹೃದಯ ಸಂಘದ ಅಧ್ಯಕ್ಷ ಪ್ರೊ. ಮಾರ್ಕ್ ಕ್ರೀಗರ್ ಹೇಳುವಂತೆ ಮಧುಮೇಹ ಸಮಸ್ಯೆಯ ಹೆಚ್ಚಳವು ಹೃದ್ರೋಗದ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟರಾಲ್ ಪ್ರಮಾಣ ಹೆಚ್ಚಿರುವ  ರೋಗಿಗಳು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ ಎಂದಿರುವ ಕ್ರೀಗರ್, ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಸಕ್ಕರೆಯ ಸೇವನೆಯನ್ನು ನಿಯಂತ್ರಿಸದಿದ್ದರೆ ಹೃದಯ ರೋಗಕ್ಕೆ ತುತ್ತಾಗುತ್ತಾರೆ ಎಂದಿದ್ದಾರೆ.

    ಭಾರತದಲ್ಲಿ ಸಾವಿನ ಪ್ರಮಾಣ ಹೆಚ್ಚಲು ಹೃದಯ ಖಾಯಿಲೆ ಪ್ರಮುಖ ಕಾರಣವಾಗಿದೆ ಎಂದು ವಿಶ್ವ ಹೃದಯ ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಡಾ. ಸಲೀಂ ಯೂಸುಫ್ ತಿಳಿಸಿದ್ದಾರೆ.ರಾಷ್ಟ್ರದ ಸರಾಸರಿಗಿಂತ ಮೂರುಪಟ್ಟು ಹೆಚ್ಚಿನ ಹೃದಯರೋಗಿಗಳು ಕೇರಳದಲ್ಲಿ ಇದ್ದಾರೆ . ಕೇರಳದವರ ಜೀವನಶೈಲಿ ಇದಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ. ಅಂಗಾರ (ಹೈಡ್ರೋಜನ್ ಮತ್ತು ಆಮ್ಲಜನಕದ ಸಂಯುಕ್ತ)ದ ಸೇವನೆ ಕಡಿಮೆಗೊಳಿಸಿ ಹಣ್ಣುಗನ್ನು ಹೆಚ್ಚಾಗಿ ಸೇವಿಸುವ ಮೂಲಕ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದ ಅವರು, ದೈನಂದಿನ ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿಸಿದರು.

  ಹೃದಯರೋಗದ ಲಕ್ಷಣಗಳು ಬದಲಾಗುತ್ತಿರುವಂತೆಯೇ ಹೃದಯನಾಳ ರಚನೆಯ ತಂತ್ರಜ್ಞಾನ ಒಳಗೊಂಡ ವಿನೂತನ ಚಿಕಿತ್ಸಾ ಪದ್ದತಿಯನ್ನು ಅನುಷ್ಠಾನಗೊಳಿಸಲಾಗಿದ್ದು ಇದು ರೋಗಿಗಳಲ್ಲಿ ಹೆಚ್ಚಿನ ಆಶಾಭಾವನೆ ಮೂಡಿಸಿದೆ ಎಂದು ಯುರೋಪಿಯನ್ ಹೃದಯತಜ್ಞರ ಸಂಘಟನೆಯ ನಿಯೋಜಿತ ಅಧ್ಯಕ್ಷ ಜೇಮ್ಸ್ ಬ್ಲಾಂಕೆನ್‌ಷಿಪ್ ಹೇಳಿದರು. ಹೃದಯ ರೋಗವನ್ನು ಪತ್ತೆಹಚ್ಚಲು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸಲಾಗಿದೆ. ಆದರೆ ಜನರು ಇದರ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದು ಯುರೋಪಿಯನ್ ಹೃದಯತಜ್ಞರ ಸಂಘಟನೆಯ ಅಧ್ಯಕ್ಷ ಜೆರೋನ್ ಬಕ್ಸ್ ತಿಳಿಸಿದ್ದಾರೆ.

 ಹೃದಯವು ರಕ್ತವನ್ನು ‘ಪಂಪ್’ ಮಾಡಲು ಅಸಮರ್ಥವಾದಾಗ ಹೃದಯಾಘಾತ ಸಂಭವಿಸುತ್ತದೆ. ಈ ಸಂದರ್ಭದಲ್ಲಿ ಕೃತಕ ವಿಧಾನಗಳ ಮೂಲಕ ಹೃದಯದ ಕಾರ್ಯವನ್ನು ಮುಂದುವರಿಸಲು ಮತ್ತು ಆ ಮೂಲಕ ರೋಗಿಗೆ ಜೀವದಾನ ಮಾಡಲು ಸಾಧ್ಯ ಎಂದು ಅಮೆರಿಕನ್ ಹೃದಯಶಾಸ್ತ್ರ ಕಾಲೇಜಿನ ಅಧ್ಯಕ್ಷೆ ಮೇರಿ ನೊರಿನ್ ತಿಳಿಸಿದ್ದಾರೆ. ಈ ಕುರಿತು ಜನರಲ್ಲಿ ಇರುವ ಸಂದೇಹಗಳನ್ನು ನಿವಾರಿಸಿ, ಈ ಚಿಕಿತ್ಸಾ ಕ್ರಮವನ್ನು ಅಳವಡಿಸಿಕೊಂಡಾಗ ಹೃದಯರೋಗಕ್ಕೆ ಸಂಬಂಧಿಸಿ ಉಂಟಾಗುವ ಸಾವಿನ ಸಂಖ್ಯೆ ಕಡಿಮೆಯಾಗಲು ಸಾಧ್ಯವಿದೆ ಎಂದವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X