Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಾಬರಿ ಮಸ್ಜಿದ್ ಪುನರ್ ನಿರ್ಮಾಣವೇ...

ಬಾಬರಿ ಮಸ್ಜಿದ್ ಪುನರ್ ನಿರ್ಮಾಣವೇ ಜಾತ್ಯತೀತ ಮರುಸ್ಥಾಪನೆ: ದಮಾಮ್ ನಲ್ಲಿ "ಬಾಬರಿ ಮಸ್ಜಿದ್" ಸಾರ್ವಜನಿಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Dec 2016 9:49 PM IST
share
ಬಾಬರಿ ಮಸ್ಜಿದ್ ಪುನರ್ ನಿರ್ಮಾಣವೇ ಜಾತ್ಯತೀತ ಮರುಸ್ಥಾಪನೆ: ದಮಾಮ್ ನಲ್ಲಿ  ಬಾಬರಿ ಮಸ್ಜಿದ್ ಸಾರ್ವಜನಿಕ ಕಾರ್ಯಕ್ರಮ

ದಮಾಮ್,ಡಿ.10: ಜಾತ್ಯತೀತ ಭಾರತ ದೇಶದಲ್ಲಿ ಬಾಬರಿ ಮಸ್ಜಿದ್ ಎಂಬುದು ಕೇವಲ ಮುಸ್ಲಿಮರ ಪ್ರಾರ್ಥನಾಲಯವಾಗಿರದೆ ಪ್ರಜಾತಂತ್ರ ವ್ಯವಸ್ಥೆಯು ಒದಗಿಸಿರುವ ಧಾರ್ಮಿಕ ಸ್ವಾತಂತ್ರ್ಯದ ಸಂಕೇತವೂ ಆಗಿತ್ತು. 467 ವರ್ಷಗಳ ಇತಿಹಾಸವಿರುವ ಮುಸ್ಲಿಮರ ಶ್ರದ್ಧಾ ಕೇಂದ್ರವನ್ನು ಫ್ಯಾಷಿಸ್ಟ್ ಶಕ್ತಿಗಳು ಧ್ವಂಸಗೊಳಿಸುವ ಮೂಲಕ ಸಂವಿಧಾನದ ಮೇಲೆ ದಾಳಿ ನಡೆಸಿದ್ದರು.  ಆ ಹೊಡೆತದ ಪರಿಣಾಮವನ್ನು ಇಂದಿಗೂ ಭಾರತದ ಅಲ್ಪಸಂಖ್ಯಾತ ಸಮುದಾಯ, ದಲಿತ ಸಮುದಾಯ ಹಾಗೂ ಇತರ ಹಿಂದುಳಿದ ವರ್ಗಗಳು ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂವಿಧಾನವು ನೀಡಿರುವ ಅವಕಾಶ, ಹಕ್ಕುಗಳನ್ನು ಪಡೆಯಲು ಸಂವಿಧಾನದ ಮೇಲಿನ ಭರವಸೆಗಳನ್ನು ಉಳಿಸಿಕೊಳ್ಳುತ್ತಾ ಪ್ರಜಾಸತ್ತಾತ್ಮಕ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ. ಬಾಬರಿ ಧ್ವಂಸದಿಂದ ಆರಂಭವಾಗಿ ಕೋಮು ಗಲಭೆ, ನಕಲಿ ಎನ್ ಕೌಂಟರ್, ಕರಾಳ ಕಾನೂನು, ಗೋಹತ್ಯೆ ನೆಪದಲ್ಲಿ ಹತ್ಯೆ, ಅತ್ಯಾಚಾರ ಹಾಗೂ ಇದೀಗ ಮುಸ್ಲಿಮರ ವೈಯಕ್ತಿಕ ಕಾನೂನು- ಶರೀಅತ್ ವ್ಯವಸ್ಥೆಯನ್ನು ಧ್ವಂಸಗೊಳಿಸುವ ಮಟ್ಟಕ್ಕೆ ತಲುಪಿದೆ. ಬಾಬರಿ ಮಸ್ಜಿದ್ ಪುನರ್ ನಿರ್ಮಾಣದ ಮೂಲಕ ಜಾತ್ಯತೀತತೆಯನ್ನು ಮರುಸ್ಥಾಪನೆಗೊಳಿಸುವತ್ತ ಹೋರಾಟ ನಡೆಸಬೇಕಾಗಿದೆ ಎಂದು ಇಂಡಿಯನ್ ಸೋಶಿಯಲ್ ಫೋರಮ್ ಈಸ್ಟರ್ನ್ ಪ್ರೊವಿನ್ಸ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಫಯಾಝ್ ಎನ್. ತಿಳಿಸಿದರು.

ಅವರು ಇಂಡಿಯನ್ ಸೋಶಿಯಲ್ ಫೋರಮ್ ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ರಾಜ್ಯ ಸಮಿತಿಯು ಡಿಸೆಂಬರ್ 6 ರಂದು ಮಂಗಳವಾರ ರಾತ್ರಿ 8 ಗಂಟೆಗೆ ದಮಾಮ್ ಹೋಟೆಲ್ ಪ್ಯಾರಗನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ  ''ಡಿಸೆಂಬರ್ 6 ಮರೆಯದಿರೋಣ...ಭರವಸೆಗಳನ್ನು ಉಳಿಸಿಕೊಳ್ಳೋಣ'' ಎಂಬ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ಇಂಡಿಯಾ ಫ್ರೆಟರ್ನಿಟಿ ಫೋರಮ್ ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್ ಇಮ್ತಿಯಾಜ಼್ ಹಾಗೂ ಸಾಮಾಜಿಕ ಕಾರ್ಯಕರ್ತ, ಭಾರತ ರಾಯಭಾರಿ ಕಚೇರಿಯ ಸ್ವಯಂಸೇವಕ ಪ್ರತಿನಿಧಿ ಮುಹಮ್ಮದ್ ಶರೀಫ್ ಕಾರ್ಕಳ ಉಪಸ್ಥಿತರಿದ್ದರು. ಸಭಾಧ್ಯಕ್ಷತೆಯನ್ನು ಇಂಡಿಯನ್ ಸೋಶಿಯಲ್ ಫೋರಮ್ ಕರ್ನಾಟಕ ರಾಜ್ಯಾಧ್ಯಕ್ಷ ಎ. ಎಂ. ಆರಿಫ್ ವಹಿಸಿದ್ದರು. ಸೋಶಿಯಲ್ ಫೋರಮ್ ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಶಫಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸೋಶಿಯಲ್ ಫೋರಮ್ ಸದಸ್ಯ ಮುಹಮ್ಮದ್ ಅಝರುದ್ದೀನ್ ಕಿರಾಅತ್ ಪಠಿಸಿದರು. ಸೋಶಿಯಲ್ ಫೋರಮ್ ದಮಾಮ್ ಬ್ರಾಂಚ್ ಅಧ್ಯಕ್ಷ ಮುಹಮ್ಮದ್ ರಫೀಕ್ ಧನ್ಯವಾದ ಸಲ್ಲಿಸಿದರು. ಖಾಲಿದ್ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X