ಅಂತರ್ ರಾಜ್ಯ- ವಲಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮಣಿಪಾಲ, ಡಿ.11: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಶ್ರಯದಲ್ಲಿ ಮಣಿಪಾಲ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ 41ನೆ ಜೂನಿಯರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಎರಡು ದಿನಗಳ ಅಂತರ್ ರಾಜ್ಯ-ಅಂತರ್ ವಲಯ ಪಂದ್ಯಾಟವನ್ನು ಮಣಿಪಾಲ ಏಜ್ಯುಕೇಶನ್ ಆ್ಯಂಡ್ ಮೆಡಿಕಲ್ ಗ್ರೂಪ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ರಂಜನ್ ಪೈ ರವಿವಾರ ಮಣಿ ಪಾಲದ ಮರೀನಾದಲ್ಲಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಮಣಿಪಾಲ ವಿವಿಯ ಪ್ರೊಚಾನ್ಸೆಲರ್ ಡಾ. ಎಚ್.ಎಸ್.ಬಲ್ಲಾಳ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಅಭ್ಯಾಸದ ವೇಳೆ ಕೇವಲ ಪಠ್ಯಕ್ಕೆ ಸೀಮಿತವಾಗಿರದೆ ಕ್ರೀಡೆ, ಕಲೆಯಲ್ಲೂ ತೊಡಗಿಸಿ ಕೊಳ್ಳಬೇಕು. ಇದರಿಂದ ತಮ್ಮ ವ್ಯಕ್ತಿತ್ವ ವಿಕಸನಗೊಂಡು ಭವಿಷ್ಯದಲ್ಲಿ ಯಶಸ್ವಿ ಯಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಬ್ಯಾಡ್ಮಿಂಟನ್ ಅಸೋಸಿ ಯೇಶನ್ ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಎನ್.ಸಿ.ಸುಧೀರ್, ಪದಾಧಿಕಾರಿ ಕೆ.ಎನ್.ಜೈಸ್ವಾಲ್ ಉಪಸ್ಥಿತರಿದ್ದರು.
ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್ ಸ್ವಾಗತಿಸಿದರು.
ಮಣಿಪಾಲ ವಿವಿ ಕ್ರೀಡಾ ಮಂಡಳಿಯ ಕಾರ್ಯದರ್ಶಿ ಡಾ. ವಿನೋದ್ ನಾಯಕ್ ವಂದಿಸಿದರು.





