Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜ ಬದಲಾವಣೆಗೆ ಯುವಕರು ಪಣ ತೊಡಲಿ:...

ಸಮಾಜ ಬದಲಾವಣೆಗೆ ಯುವಕರು ಪಣ ತೊಡಲಿ: ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ11 Dec 2016 11:24 PM IST
share
ಸಮಾಜ ಬದಲಾವಣೆಗೆ ಯುವಕರು ಪಣ ತೊಡಲಿ: ಸಂತೋಷ್ ಹೆಗ್ಡೆ

ಮೂಡಿಗೆರೆ, ಡಿ.11: ತಪ್ಪುಮಾಡಿದವರಿಗೆ ಶಿಕ್ಷೆ ಕೊಡುವಂತಹ ಸಮಾಜದಲ್ಲಿದ್ದರೂ ಕೂಡ ಅದು ಸಾಧ್ಯವಾಗದೇ ಇರುವುದು ದುರಂತ. ಇದು ಶ್ರೀಮಂತ ಮತ್ತು ಅಧಿಕಾಕ್ಕೆ ಬೆಲೆ ಕೊಡುವ ಸಮಾಜವಾಗಿದೆ.ಇದನ್ನು ಬದಲಾಯಿಸಲು ಯುವ ಜನತೆ ಮುಂದೆ ಬರಬೇಕಾಗಿದೆ ಎಂದು ೋಕಾಯುಕ್ತ ನಿವೃತ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಕರೆ ನೀಡಿದ್ದಾರೆ.


 ಅವರು ತಾಲೂಕಿನ ಸಮೀಪದ ಹಳಸೆ ಬಳಿ ನೂತನವಾಗಿ ಪ್ರಾರಂಭಗೊಂಡ ದಿ ಕಾಫಿ ಕೋರ್ಟ್ ಸಂಸ್ಥೆಯ ಬೃಹತ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ದೇಶದಲ್ಲಿ ಬಹಳಷ್ಟು ದೊಡ್ಡ ಹಗರಣಗಳು ನಡೆದಿವೆ. 50 ದಶಕದಲ್ಲಿ ಮುಂಡಾ ನಗರವಾಲ್ ಹಗರಣ ನಡೆದಿದ್ದು, ಕಾಮನ್‌ವೆಲ್ತ್ ಹಗರಣ, 2ಜಿ. ಹಗರಣ, ಕಲ್ಲಿದ್ದಲು ಹಗರಣಗಳು ಜನರನ್ನು ಬೆಚ್ಚಿ ಬೀಳಿಸಿದೆ ಎಂದು ತಿಳಿಸಿದರು.


ಇಷ್ಟೊಂದು ಹಣ ಸೋರಿಕೆಯಾದರೆ ಜನಸಾಮಾನ್ಯರು ಎಷ್ಟು ಕಷ್ಟ ಅನುಭವಿಸಬಹುದೆಂದು ಊಹಿಸಲು ಸಾಧ್ಯವಿಲ್ಲ. ಆರೂವರೆ ಸಾವಿರ ಕೋಟಿ ಜನಸಂಖ್ಯೆ ಇರುವ ನಮ್ಮ ರಾಜ್ಯದಲ್ಲಿ 2016-17ನೆ ಸಾಲಿನ ಬಜೆಟ್‌ನ ಕಡಿಮೆ ಮೊತ್ತದಲ್ಲಿ ಯಾವ ಅಭಿವೃದ್ಧಿ ಕಾಣಲು ಸಾಧ್ಯವೆಂದು ಪ್ರಶ್ನಿಸಿದ ಅವರು, ಶಾಸಕಾಂಗ,ಕಾರ್ಯಾಂಗ ಮತ್ತು ನ್ಯಾಯಾಂಗ ಈ ಎಲ್ಲದರಲ್ಲೂ ನಾವು ದುರಾಸೆ ಕಾಣುತ್ತಿದ್ದೇವೆ. ಆಡಳಿತ ವ್ಯವಸ್ಥೆಯಲ್ಲಿ ಈ ಸಮಾಜದಲ್ಲಿ ಒಂದು ಮಗುವಿಗೆ ಭವಿಷ್ಯ ನೀಡುವ ಶಕ್ತಿ ಇದ್ದರೂ ಕೂಡ, ಹಣದ ಆಸೆಗಾಗಿ ಮಾನವೀಯತೆ ಮರೆಯುತ್ತಿರುವುದರ ಜೊತೆಗೆ ಬಡಜನರ ಭವಿಷ್ಯದೊಂದಿಗೆ ಆಟವಾಡುತ್ತಿರುವುದು ದುರಂತ ಎಂದು ಹೇಳಿದರು.

ಬಳಿಕ ಖ್ಯಾತ ಹಿನ್ನಲೆ ಗಾಯಕಿ ಎಂ.ಡಿ.  ಪಲ್ಲವಿ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿ ಕಾಫಿ ಕೋರ್ಟ್ ಸಂಸ್ಥೆ ಅಧ್ಯಕ್ಷ ಡಿ.ಬಿ.ಜಯಪ್ರಕಾಶ್ ವಹಿಸಿದ್ದರು. ವೇದಿಕೆಯಲ್ಲಿ ಶಾಸಕ ಬಿ.ಬಿ.ನಿಂಗಯ್ಯ, ಎಂಎಲ್‌ಸಿಗಳಾದ ಡಾ.ಮೋಟಮ್ಮ, ಎಂ.ಕೆ.ಪ್ರಾಣೇಶ್, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ, ಮಾಜಿ ಸಂಸದ ಬಿ.ಎಲ್.ಶಂಕರ್, ಜಿಲ್ಲಾಧಿಕಾರಿ ಜಿ.ಸತ್ಯವತಿ, ಹಳಸೆ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X