ರೈಲ್ವೆ ಹಳಿಯಲ್ಲಿ ಬಿದ್ದು ಮೃತ್ಯು
ಬೈಂದೂರು, ಡಿ.13: ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ರೈಲಿನಿಂದ ಇಳಿಯುವಾಗ ಅಥವಾ ಪ್ಲಾಟ್ ಪಾರ್ಮನಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ರೈಲ್ವೆ ಹಳಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಂಕರನಾರಾಯಣ ಎಂಬವರು ಬೈಂದೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





