ತರೀಕೆರೆ: ಆನೆ ದಾಳಿಗೆ ಕೃಷಿಕ ಸಾವು
ತರೀಕೆರೆ, ಡಿ.13: ಒಂಟಿ ಸಲಗದ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಲಕ್ಕವಳ್ಳಿ ಹೋಬಳಿಯ ಭದ್ರಾ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅರುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಅರುವನಹಳ್ಳಿ ಗ್ರಾಮದ ನಿವಾಸಿ ರಮೇಶ(35)ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ರಮೇಶ ತನ್ನ ಅಡಿಕೆ ತೋಟದಲ್ಲಿ ಬೆಳಗ್ಗೆ 10:30ರ ವೇಳೆ ಕೆಲಸ ಮಾಡುತ್ತಿದ್ದ ಸಂದರ್ಭ ದಲ್ಲಿ ಎಲ್ಲಿಂದಲೋ ಬಂದ ಒಂಟಿ ಸಲಗ ಆನೆ ದಾಳಿ ನಡೆಸಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ರಮೇಶ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಲಕ್ಕವಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





