Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರ ಆನ್‌ಲೈನ್ ವಂಚನೆಯಲ್ಲಿ...

ಸರಕಾರ ಆನ್‌ಲೈನ್ ವಂಚನೆಯಲ್ಲಿ ಕಳೆದುಕೊಂಡಿದ್ದು 20,000 ಕೋಟಿ!

ವಾರ್ತಾಭಾರತಿವಾರ್ತಾಭಾರತಿ13 Dec 2016 11:51 PM IST
share

ಹೊಸದಿಲ್ಲಿ, ಡಿ.13: ನವೆಂಬರ್ 8ರಂದು 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಕಾಳಧನ ನಿಯಂತ್ರಣದ ನೆಪದಲ್ಲಿ ಅಮಾನ್ಯಗೊಳಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರ ಇದೀಗ ಕ್ಯಾಶ್ ಲೆಸ್ ಇಕಾನಮಿಯ ಬಗ್ಗೆ ಮಾತನಾಡಲಾರಂಭಿಸಿದ್ದು ಜನರು ಹೆಚ್ಚು ಹೆಚ್ಚಾಗಿ ಡಿಜಿಟಲ್ ಟ್ರಾನ್ಸಾಕ್ಷನ್ ನಡೆಸಬೇಕೆಂದು ಕರೆ ನೀಡುತ್ತಿದೆ. ಡಿಜಿಟಲ್ ಟ್ರಾನ್ಸಾಕ್ಷನ್ ನಡೆಸಿದವರು ಅದೃಷ್ಟ ಬಹುಮಾನಗಳಿಗೂ ಅರ್ಹರಾಗುತ್ತಾರೆಂದು ಹೇಳಿರುವ ಸರಕಾರ ಕೆಲವೊಂದು ಡಿಜಿಟಲ್ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ಡಿಸ್ಕೌಂಟುಗಳನ್ನೂ ಘೋಷಿಸಿದೆ.

ಆದರೆ ಡಿಜಿಟಲೀಕರಣ ಬಗ್ಗೆ ಇಷ್ಟೊಂದು ಆಸಕ್ತವಾಗಿರುವ ಕೇಂದ್ರ ಸರಕಾರ ಸೈಬರ್ ಕ್ರೈಂ ತಡೆಯಲು ಹಾಗೂ ಸೈಬರ್ ಸೆಕ್ಯುರಿಟಿ ಹೆಚ್ಚಿಸಲು ಏನೆಲ್ಲಾ ಕ್ರಮ ಕೈಗೊಂಡಿದೆಯೆಂಬ ಪ್ರಶ್ನೆಗೆ ನಿರಾಶಾದಾಯಕ ಉತ್ತರ ದೊರಕುತ್ತಿದೆ.
ಒಂದು ಮೂಲದ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಸೈಬರ್ ಅಪರಾಧಗಳಿಂದಾಗಿ ಸಾರ್ವಜನಿಕ ರಂಗದ ಬ್ಯಾಂಕುಗಳು ಬರೋಬ್ಬರಿ 20,000 ಕೋಟಿ ಹಣ ಕಳೆದುಕೊಂಡಿವೆ. ಆದರೂ ಈ ಬಗ್ಗೆ ಅನಾಸ್ಥೆ ತೋರಿಸುತ್ತಿದೆ ಸರಕಾರ.
  
ಇನ್ನೂ ಆತಂಕದ ವಿಚಾರವೆಂದರೆ ಸೈಬರ್ ಅಪರಾಧ ಪ್ರಕರಣಗಳ ವಿಚಾರಣೆ ನಡೆಸುವ ದಿಲ್ಲಿಯಲ್ಲಿರುವ ಸೈಬರ್ ಎಪಲ್ಲೇಟ್ ಟ್ರಿಬ್ಯುನಲ್‌ಗೆ ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರೇ ಇಲ್ಲ. ವಿಚಾರಣೆ ನಡೆಸಲು ನ್ಯಾಯಾಧೀಶರುಗಳೂ ಇಲ್ಲ. ಮೇಲಾಗಿ ನಮ್ಮ ಹೆಚ್ಚಿನ ಎಲ್ಲಾ ಬ್ಯಾಂಕುಗಳ ಎಟಿಎಂ ಮೆಶೀನುಗಳು (ಶೇ.70ರಷ್ಟು) ವಿಂಡೋಸ್ ಎಕ್ಸ್‌ಪಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ ವಿಂಡೋಸ್ ಎಕ್ಸ್‌ಪಿ ಸರ್ವಿಸನ್ನು ಮೈಕ್ರೋಸಾಫ್ಟ್ ಕಂಪೆನಿ 2014 ಎಪ್ರಿಲ್ ತಿಂಗಳಿನಿಂದ ನಿಲ್ಲಿಸಿದೆ. ಇದರಿಂದ ನಮ್ಮ ದೇಶದ ಎಟಿಎಂಗಳು ಹಳೆಯ ತಂತ್ರಜ್ಞಾನದಂತೆ ಕಾರ್ಯನಿರ್ವಹಿಸುತ್ತಿವೆಯೆಂಬುದು ಸ್ಪಷ್ಟ ಎಂದು ಸೈಬರ್ ಅಪರಾಧ ವಿಷಯಗಳ ತಜ್ಞರಾಗಿರುವ ಪ್ರಶಾಂತ್ ಮಾಲಿ ಹೇಳುತ್ತಾರೆ. ಪ್ರತಿ ವರ್ಷ ದೇಶದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಶೇ.300ರಷ್ಟು ಹೆಚ್ಚಾಗುತ್ತಿದ್ದು ಜನರು ವಿವಿಧ ರೀತಿಗಳಲ್ಲಿ ಸೈಬರ್ ಕ್ರೈಂಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಹಣವನ್ನು ಕಳೆದುಕೊಳ್ಳುತ್ತಿದ್ದಾರೆಂಬುದು ನಿಜಕ್ಕೂ ಆತಂಕಕಾರಿ ಸಂಗತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X