ಎಚ್‌ವೈ ಮೇಟಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಬೆಂಗಳೂರು, ಡಿ.14: ಸರಕಾರಿ ಕಚೇರಿಯಲ್ಲಿ ರಾಸಲೀಲೆ ನಡೆಸಿದರೆಂಬ ಆರೋಪ ಹೊತ್ತಿರುವ ಅಬಕಾರಿ ಸಚಿವ ಎಚ್‌ವೈ ಮೇಟಿ ಅವರನ್ನು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ರಾಸಲೀಲೆ ವಿಡಿಯೋ ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವ ಎಚ್‌ವೈ ಮೇಟಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳ ಎದುರಿನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಮೇಟಿಗೆ ಕ್ಲಾಸ್ ತೆಗೆದುಕೊಂಡರು. ಆದರೆ ಮೇಟಿ ಮರುಮಾತನಾಡದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ನಡೆದರು.
ಮೇಟಿ ರಾಜೀನಾಮೆ ಪಡೆದಿರುವ ಸಿಎಂ ಅವರು ಅಂಗೀಕಾರಕ್ಕೆ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿರುವುದನ್ನು ದೃಢಪಡಿಸಿದ್ದಾರೆ.ಎಚ್‌ವೈ ಮೇಟಿ ಪ್ರಕರಣದ ತನಿಖೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆಂದು ತಿಳಿದು ಬಂದಿದೆ
Next Story





