Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಪ್ರವಾಸೋದ್ಯಮ ತಾಣಗಳಲ್ಲಿ ಮೂಲ...

ಜಿಲ್ಲೆಯ ಪ್ರವಾಸೋದ್ಯಮ ತಾಣಗಳಲ್ಲಿ ಮೂಲ ಭೂತ ಸೌಕರ್ಯ ,ಶುಚಿತ್ವ ,ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಸಾರ್ವಜನಿಕರ ಆಗ್ರಹ

ಪ್ರವಾಸೋದ್ಯಮ ಅಭಿವೃದ್ಧಿ -ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ14 Dec 2016 5:58 PM IST
share
ಜಿಲ್ಲೆಯ ಪ್ರವಾಸೋದ್ಯಮ ತಾಣಗಳಲ್ಲಿ ಮೂಲ ಭೂತ ಸೌಕರ್ಯ ,ಶುಚಿತ್ವ ,ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಸಾರ್ವಜನಿಕರ ಆಗ್ರಹ

ಮಂಗಳೂರು,ಡಿ.14:ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ಸಂಪರ್ಕ ವ್ಯವಸ್ಥೆ,ಶುಚಿತ್ವಕ್ಕೆ ಗಮನಹರಿಸಬೇಕು ಎಂದು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂದು ಜಿಲ್ಲಾಡಳಿತ ಹಾಗೂ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಹೆಚ್ಚಿನ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಸಾಧ್ಯವಾಗುವ ಯೋಜನೆಯನ್ನು ತಕ್ಷಣ ಕಾರ್ಯಗತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಜಗದೀಶ್ ತಿಳಿಸಿದರು.ಜಿಲ್ಲೆಯ ಪ್ರವಾಸಿ ತಾಣಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರವಾಸೋದ್ಯಮ ಇಲಾಖೆಯಿಂದ ಆಗಬೇಕಾದ ಕೆಲಸಗಳ ಬಗ್ಗೆ ತ್ವರಿತವಾಗಿ ಗಮನಹರಿಸಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಸಿಹಿತ್ಲು ಬೀಚ್‌ನಲ್ಲಿ ಸರ್ಫಿಂಗ್ ಅಭಿವೃದ್ಧಿಗೆ ಕ್ರಮ:-ಸಸಿ ಹಿತ್ಲು ಬೀಚ್‌ನಲ್ಲಿ ವಿಶೇಷವಾಗಿ ಸರ್ಫಿಂಗ್ ನಡೆಸಲು ಪೂರಕವಾದ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದರು.

  ಬೀಚ್‌ಗಳ ಸ್ವಚ್ಛತೆಗೆ ಸ್ಥಳೀಯಾಡಳಿತ ಸಮಸ್ಥೆಗಳಿಗೆ ಸೂಚನೆ:-ಬೀಚ್‌ಗಳನ್ನು ಸ್ವಚ್ಛವಾಗಿರುವ ಬಗ್ಗೆ ಸ್ಥಳೀಯವಾಗಿರುವ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದರು.

ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ,ಸಾರ್ವಜನಿಕರ ವಿವಿಧ ಸಲಹೆ ಸೂಚನೆ

►ಪ್ರವಾಸೋದ್ಯಮ ಬೀಚ್‌ಗಳಲ್ಲಿ ಬಯಲು ಶೌಚಾಲಯ ಮುಕ್ತಗೊಳಿಸಿ ಅಲ್ಲಿ ಟಾಯಿಲೆಟ್ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.

►ಜಿಲ್ಲೆಯ ಧಾರ್ಮಿಕ ಸ್ಥಳಗಳ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯೊಂದಿಗೆ ಬೀಚ್‌ಗಳ ಹಾಗೂ ಮಂಗಳೂರು ನಗರದ ಹೊರ ಭಾಗದಲ್ಲಿರುವ ಗಡಿ ಪ್ರದೇಶಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೂ ಗಮನ ಹರಿಸಬೇಕು.

►ಜಿಲ್ಲೆಯ ತಲಪಾಡಿ,ಸುರತ್ಕಲ್ ಬೀಚ್ ಗಳ ಅಭಿವೃದ್ಧಿ ಯೋಜನೆ ನೆನೆಗುದಿಗೆ ಬಿದ್ದಿದೆ ಅವುಗಳ ಅಭಿವೃದ್ಧಿಯಾಗಬೇಕು.

►ಸೋಮೇಶ್ವರ ,ತಲಪಾಡಿ ಬೀಚ್‌ಗಳ ಅಬಿವೃದ್ಧಿಯೊಂದಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಸುರಕ್ಷತೆಯ ಕ್ರಮಗಳನ್ನು ಕೈ ಗೊಳ್ಳಬೇಕಾಗಿದೆ.

►ಬೈಕಂಪಾಡಿಯ ಬೀಚ್‌ನ್ನು ಸಂಪರ್ಕಿಸುವ ರಸ್ತೆಯಲ್ಲಿ ಸ್ವಚ್ಛತೆಯ ಸಮಸ್ಯೆ ಇದೆ ಅದನ್ನು ಪರಿಹರಿಸಬೇಕು.

►ಮಂಗಳೂರು ಹೊರ ವಲಯದಲ್ಲಿರುವ ಮೂಡಬಿದಿರೆಯ ಸಾವಿರ ಕಂಬದ ಬಸದಿ,ಅತ್ತೂರು ಚರ್ಚ್,ಕುದುರೆ ಮುಖ,ಎನ್‌ಐಟಿಕೆ ,ಸುರತ್ಕಲ್ ,ಉಳ್ಳಾಲ ದರ್ಗಾ,ತಲಪಾಡಿ ಬಳಿಯ ದ್ವೀಪ,ಗುರುಪುರ ಕೈ ಕಂಬ ಪ್ರದೇಶದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅವಕಾಶಗಳಿವೆ.

► ಕೊಡಗಿನ ಮಾದರಿಯಲ್ಲಿ ಜಿಲ್ಲೆಯಲ್ಲಿ ಹೋಂ ಸ್ಟೇಗಳಿಗೆ ಅವಕಾಶ ನೀಡಬೇಕು.

► ಜಿಲ್ಲೆಯಲ್ಲಿ ಸುಸಜ್ಜಿತ ಮೂಸಿಯಂ ನಿರ್ಮಾಣ ಮತ್ತು ಹಳೆ ಮಂಗಳೂರಿನ ಪಳೆಯುಳಿಕೆಯನ್ನು ಉಳಿಸಿಕೊಂಡು ಹೆರಿಟೇಜ್ ಮಂಗಳೂರು ನಗರ ನಿರ್ಮಾಣ.

►ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಪಿಕ್‌ನಿಕ್ ಗಾಗಿ ವಾಹನ ನಿಗದಿತ ಅವಧಿಯಲ್ಲಿ ಬಸ್ ಸೌಕರ್ಯ ಏರ್ಪಡಿಸುವುದು.

►ತರಬೇತಾದ ಪ್ರವಾಸೋದ್ಯಮದ ಗೈಡ್‌ಗಳನ್ನು ನೇಮಿಸುವುದು.

►ಮಂಗಳೂರು ನಗರದಲ್ಲಿ ಈಗಾಗಲೆ ಗುರುತಿಸಲಾದ 18 ಸ್ಥಳಗಳ ಜೊತೆಗೆ ಪ್ರವಾಸಿಗರು ಭೇಟಿ ನೀಡುವ ಪ್ರದೇಶಗಳಲ್ಲಿ ಜನರಿಗೆ ಸುರಕ್ಷತೆಯ ಬಗ್ಗೆ ಹಚ್ಚಿನ ಗಮನಹರಿಸಬೇಕು .ನಗರದ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅತ್ಯಂತ ಪುರಾತನ ಮರದ ಕೆತ್ತನೆ ಕುಶಲ ಕಲೆಗಳ ಬಗ್ಗೆ ಪ್ರವಾಸಿಗರಿಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ.

►ಟ್ಯಾಕ್ಸಿ ಚಾಲಕರಿಗೂ ಪ್ರವಾಸೊದ್ಯಮಕ್ಕೆ ಪೂರಕವಾದ ತರಬೇತಿ ನೀಡಬೇಕು.

► ಸ್ಥಳೀಯವಾಗಿ ಖಾಸಗಿಯವರು ಪ್ರವಾಸೋದ್ಯಮಕ್ಕಾಗಿ ನಡೆಸುವ ಪೂರಕ ಚಟುವಟಿಕೆಗೆ ಪ್ರವಾಸೋದ್ಯಮ ಇಲಾಖೆಯಿಂದ ಸೂಕ್ತ ಸಹಕಾರ ,ಮಾರ್ಗದರ್ಶನ ದೊರೆಯಬೇಕು.

 ►ಸೈಕಲ್ ಸವಾರರಿಗೆ ಹಾಗೂ ಪಾದಾಚಾರಿಗಳಿಗೆ ಅನುಕೂಲವಾಗುವ ವಲಯಗಳನ್ನು ,ವಾಹನ ಮುಕ್ತ ವಲಯಗಳನ್ನು ನಗರದಲ್ಲಿ ನಿರ್ಮಿಸಬೇಕು ಮೊದಲಾದ ಸಲಹೆಗಳನ್ನು ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು,ವಿವಿಧ ಸಂಸ್ಥೆಗಳ ಪ್ರತಿನಿಧಿ ನೀಡಿದರು.ಕೆನರಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಜೀವನ್ ಸಲ್ದಾನಾ,ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X