ಮೂಡುಬಿದಿರೆ ಪುರಸಭೆ : ಅಧ್ಯಕ್ಷರಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ವಿನೋದ್ ಸೆರಾವೋ ಆಯ್ಕೆ

ಮೂಡುಬಿದಿರೆ,ಡಿ.14 : ಇಲ್ಲಿನ ಪುರಸಭೆಗೆ ನೂತನ ಅಧ್ಯಕ್ಷರಾಗಿ ಹರಿಣಾಕ್ಷಿ ಹಾಗೂ ಉಪಾಧ್ಯಕ್ಷರಾಗಿ ವಿನೋದ್ ಸೆರಾವೋ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮಹಿಳೆ ಮೀಸಲಾತಿಯಿರುವ ಅಧ್ಯಕ್ಷ ಸ್ಥಾನ ಹಾಗೂ ಸಾಮಾನ್ಯ ಮೀಸಲಾತಿಯಿರುವ ಉಪಾಧ್ಯಕ್ಷ ಸ್ಥಾನಕ್ಕೆ ಪುರಸಭೆ ಸಭಾಭವನದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿತ್ತು. ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ,ಉಪಾಧ್ಯಕ್ಷರನ್ನು ಚುನಾವಣಾಧಿಕಾರಿ,ಮೂಡುಬಿದಿರೆ ತಹಸೀಲ್ದಾರ್ ಮಹಮ್ಮದ್ ಇಸಾಕ್ ಘೋಷಣೆ ಮಾಡಿದರು.
ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ನೂತನ ಅಧ್ಯಕ್ಷೆ, ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುರಸಭಾ ಮುಖ್ಯಾಧಿಕಾರಿ ಶೀನ ನಾಯ್ಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಚಂದ್ರಹಾಸ ಸನಿಲ್ ಹಾಗೂ ಪುರಸಭಾ ಸದಸ್ಯರು ಉಪಸ್ಥಿತರಿದ್ದರು.
Next Story





