ರಾಜ್ಯ ಸಬ್ ಜೂನಿಯರ್ ಬಾಲ್‌ಬ್ಯಾಡ್ಮಿಂಟನ್ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ
.jpg)
ಮೂಡುಬಿದಿರೆ,ಡಿ.14: ಕರ್ನಾಟಕ ಬಾಲ್ ಬಾಡ್ಮಿಂಟನ್ ಸಂಸ್ಥೆಯ ಆಶ್ರಯದಲ್ಲಿ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಬುಧವಾರ ಮುಕ್ತಾಯಗೊಂಡ ರಾಜ್ಯ ಸಬ್ ಜೂನಿಯರ್ ಬಾಲ್‌ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಅತಿಥೇಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡ ಬಾಲಕ ಹಾಗೂ ಬಾಲಕಿಯರ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿದೆ. ರಾಜ್ಯದ 20 ಬಾಲಕರ ಹಾಗೂ 14 ಬಾಲಕಿಯರ ತಂಡ ಟೂರ್ನಿಯಲ್ಲಿ ಭಾಗವಹಿಸಿತ್ತು.
ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಬಾಲಕರ ವಿಭಾಗದ ಫೈನಲ್ಸ್‌ನಲ್ಲಿ ಆಳ್ವಾಸ್ ತಂಡ ತುಮಕೂರಿನ ಸ್ವರ್ಣಾಂಭ ಹೊನ್ನಡುಕೆ ತಂಡವನ್ನು 35-32 ಹಾಗೂ 35-21 ನೇರ ಸೆಟ್‌ಗಳಿಂದ ಸೋಲಿಸಿತು. ಬಾಲಕಿಯರ ವಿಭಾಗದ ಫೈನಲ್ಸ್‌ನಲ್ಲಿ ಆಳ್ವಾಸ್ ತಂಡ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮಾಕವಲ್ಲಿ ತಂಡವನ್ನು 35-17 ಹಾಗೂ 35-30 ನೇರ ಸೆಟ್‌ಗಳಿಂದ ಸೋಲಿಸಿ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಿಜೇತರಿಗೆ ಉದ್ಯಮಿ ದೇವಿಪ್ರಸಾದ್ ಶೆಟ್ಟಿ ರಾಜ್ಯ ಸಂಸ್ಥೆಯ ಕಾರ್ಯದರ್ಶಿ ದಿನೇಶ್, ಉಪಾಧ್ಯಕ್ಷರಾದ ಮೊಹಮ್ಮದ್ ಇಲ್ಯಾಸ್ ಪ್ರಶಸ್ತಿ ವಿತರಿಸಿದರು.





