ಕೆಎಸ್ಸಾರ್ಟಿಸಿ ಬಸ್ - ಕಾರು ಢಿಕ್ಕಿ : ಇಬ್ಬರಿಗೆ ಗಾಯ
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮರೆದ ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ

ಬಂಟ್ವಾಳ, ಡಿ. 14: ನಾವೂರು ಗ್ರಾಮದ ಪೊಯಿಲೋಡಿ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ತಮ್ಮ ವಾಹನದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮರೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ತಿರುಮಲೇಶ್ವರ ಹಾಗೂ ರಾಗವೇಂದ್ರ ಎಂದು ಹೆಸರಿಸಲಾಗಿದೆ. ಘಟನೆಯ ಸಂದರ್ಭದಲ್ಲಿ ಇದೇ ದಾರಿಯಿಂದ ಬರುತ್ತಿದ್ದ ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ.ಬಿ.ವೇದಾಮೂರ್ತಿಯವರು ತಕ್ಷಣ ತಮ್ಮ ವಾಹನವನ್ನು ನಿಲ್ಲಿಸಿ ಚಾಲಕ ಸತೀಶ್ ಹಾಗೂ ಭದ್ರತಾ ಸಿಬ್ಬಂದಿ ಚಂದ್ರಶೇಖರವರ ಸಹಕಾರದೊಂದಿಗೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ತಮ್ಮ ವಾಹನದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೈ ಎ.ಕೆ.ರಕ್ಷಿತ್ ಗೌಡ ತಿಳಿಸಿದ್ದಾರೆ.
Next Story





