ಡಿ. 15 ರಂದು ’ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ’ ಕಾರ್ಯಕ್ರಮ
ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ’ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ’ ಕಾರ್ಯಕ್ರಮವು ಡಿ. 15 ರಂದು ಕಳ್ಳಿಗೆ ಗ್ರಾಮದಲ್ಲಿ ನಡೆಯಲಿದೆ. ಇದೇ ವೇಳೆ ಕಾರ್ಯಾಗಾರ, ಉಪನ್ಯಾಸ ಮತ್ತು ಸಂವಾದವು ನಡೆಯಲಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಶಾಸಕರಾದ ಡಾ. ಸುಧಾಕರ್, ಐವನ್ ಡಿಸೋಜ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಲ್‌ಕರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಹನುಮಂತಯ್ಯ ಅತಿಥಿಯಾಗಿ ಭಾಗವಹಿಸುವರು.
ಇತಿಹಾಸದ ಮೆಲಕು, ನುಡಿದಂತೆ ನಡೆದ ಸರಕಾರ, ಮೋಸ ಹೋದ ಜನತೆ, ಕೋಮು ಸಾಮರಸ್ಯ, ಪಕ್ಷ ಸಂಘಟನೆ ಮತ್ತು ಗೆಲುವಿನತ್ತ ಗುರಿ ವಿಚಾರದ ಕುರಿತು ಕಾರ್ಯಾಗಾರ ನಡೆಯಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ಅಬಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬ್ಲಾಕ್ ಅಧ್ಯಕ್ಷರುಗಳಾದ ಅಬ್ಬಾಸ್ ಅಲಿ ಹಾಗೂ ಮಾಯಿಲಪ್ಪ ಸಾಲ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





