ಬೈಕ್ ಕಂದಕಕ್ಕೆ ಉರುಳಿ ಸವಾರ ಸಾವು
ಅಂಕೋಲಾ, ಡಿ.14: ಬೇಲೆಕೇರಿಯಿಂದ ಬೆಳಂಬಾರಕ್ಕೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಸೇತುವೆಯಿಂದ ಕಂದಕಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಳಂಬಾರದ ಪ್ರಭಾಕರ ಯೋಜನ ಅಸ್ನೋಟಿಕರ (32)ಇವರೇ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಇವರು ಬೇಲೆಕೇರಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





