ಪುತ್ತೂರು : ಗಾಂಜಾ ಸಾಗಾಟ ಪತ್ತೆ, ಆರೋಪಿ ವಶಕ್ಕೆ
ಪುತ್ತೂರು, ಡಿ.15 : . ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಮುಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಚಿಕ್ಕಮುಡ್ನೂರು ಗ್ರಾಮದ ಸಾಲ್ಮರದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತನಿಂದ 500 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ,
Next Story





