ಉಡುಪಿ: ಮಕ್ಕಳ ಚಲನಚಿತ್ರೋತ್ಸವ ಉದ್ಘಾಟನೆ

ಉಡುಪಿ, ಡಿ.16: ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿರುವ ಮಕ್ಕಳ ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ಶುಕ್ರವಾರ ಉಡುಪಿಯ ಅಲಂಕಾರ್ ಥಿಯೇಟರ್‌ನಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅನುರಾಧ, ಡಿ.16ರಿಂದ 22ರವರೆಗೆ ಜಿಲ್ಲೆಯ 3 ತಾಲೂಕುಗಳ ಚಿತ್ರಮಂದಿರಗಳಲ್ಲಿ ಮಕ್ಕಳ ಚಿತ್ರೋತ್ಸವ ನಡೆಯ ಲಿದ್ದು, ಮಕ್ಕಳು ಚಲನಚಿತ್ರವನ್ನು ವೀಕ್ಷಿಸಿ, ಅದರಲ್ಲಿನ ಪೂರಕವಾದ ಅಂಶಗಳನ್ನು ಶೈಕ್ಷಣಿಕ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಮಕ್ಕಳನ್ನು ಚಿತ್ರಮಂದಿರಗಳಿಗೆ ಸುರಕ್ಷಿತವಾಗಿ ಕರೆತಂದು ಮರಳಿ ಶಾಲೆಗಳಿಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ಸೂಚಿಸಿದ ಅವರು, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.
ಅಲಂಕಾರ್ ಥಿಯೇಟರ್‌ನ ಮಾಲಕ ಜಗದೀಶ್ ಕುಡ್ವ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಣಾಧಿಕಾರಿ ರಾಮಚಂದ್ರ ಸ್ವಾಗತಿಸಿ ವಿಶ್ವನಾಥ ಬಾಯರಿ ವಂದಿಸಿದರು.
Next Story





