ಕಬಡ್ಡಿ ಚಾಂಪಿಯನ್‌ಶಿಪ್‌ಗೆ ಆಯ್ಕೆ

ಮಂಗಳೂರು, ಡಿ.17: ರಾಜ್ಯಮಟ್ಟದ ಅಂತರ್ ವಿಶ್ವವಿದ್ಯಾನಿಲಯ ದಕ್ಷಿಣ ವಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಗಡಿನಾಡ ಕ್ರೀಡಾಪಟು ಶ್ವೇತಾ ಸಿ.ಟಿ. ದ್ವಿತೀಯ ಬಾರಿಗೆ ಆಯ್ಕೆಯಾಗಿದ್ದಾರೆ.
ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಬಿಎ ಕನ್ನಡ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆ ಮಂಗಲ್ಪಾಡಿ ಗ್ರಾಪಂ ವ್ಯಾಪ್ತಿಯ ಕೃಷ್ಣನಗರ ನಿವಾಸಿ. ಕಳೆದ ಬಾರಿ ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಕೇರಳ ತಂಡವನ್ನು ಈಕೆ ಪ್ರತಿನಿಧಿಸಿದ್ದರು.
Next Story





