Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೀದಿಬದಿ ವ್ಯಾಪಾರಿಗಳಿಗೆ ಅನಗತ್ಯ...

ಬೀದಿಬದಿ ವ್ಯಾಪಾರಿಗಳಿಗೆ ಅನಗತ್ಯ ಕಿರುಕುಳ

ಕ್ರಮಕ್ಕೆ ಒತ್ತಾಯಿಸಿ ಬೀದಿ ವ್ಯಾಪಾರಿಗಳ ಒಕ್ಕೂಟದಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ17 Dec 2016 11:01 PM IST
share
ಬೀದಿಬದಿ ವ್ಯಾಪಾರಿಗಳಿಗೆ ಅನಗತ್ಯ ಕಿರುಕುಳ

ಸಾಗರ, ಡಿ.17: ಸಂತೆ ಹಾಗೂ ಬೀದಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ನೀಡುತ್ತಿರುವ ಅನಗತ್ಯ ಕಿರುಕುಳವನ್ನು ತಪ್ಪಿಸುವಂತೆ ಒತ್ತಾಯಿಸಿ ಗುರುವಾರ ಸಾಗರ ಪ್ರಾಂತ ಸಂತೆ ಬೀದಿ ವ್ಯಾಪಾರಿಗಳ ಒಕ್ಕೂಟದ ವತಿಯಿಂದ ನಗರಸಭೆ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಇಲ್ಲಿನ ನೆಹರೂ ನಗರ ವ್ಯಾಪ್ತಿಯಲ್ಲಿರುವ ಕೃಷ್ಣರಾಜೇಂದ್ರ ಸಂತೆಮೈದಾನ ದಿನೇ ದಿನೇ ಅತಿಕ್ರಮಣವಾಗುತ್ತಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಹುನ್ನಾರದಿಂದ ನೆಹರೂ ನಗರದ ರಸ್ತೆಯಂಚಿನಲ್ಲಿ ಸಂತೆದಿನ ವ್ಯಾಪಾರ ಮಾಡುತ್ತಿರುವ ಸುಮಾರು 150ಕ್ಕೂ ಹೆಚ್ಚು ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ನಗರಸಭೆ ಆಡಳಿತ ವಿನಾಕಾರಣ ಕಿರುಕುಳ ನೀಡುತ್ತಿದೆ.

ಇದನ್ನು ಒಕ್ಕೂಟ ಖಂಡಿಸುತ್ತಿದ್ದು, ಸಂತೆ ಸಂಸ್ಕೃತಿಗೆ ಧಕ್ಕೆ ತರುವ ಕೆಲಸವನ್ನು ಆಡಳಿತ ನಡೆಸುವವರು ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಗರಸಭೆ ವತಿಯಿಂದ ಸಂತೆ ಮೈದಾನದೊಳಗೆ ಬೃಹತ್ ಟ್ಯಾಂಕ್ ಸಹ ನಿರ್ಮಾಣ ವಾಗುತ್ತಿದೆ. ಸಂತೆ ಮೈದಾನದಲ್ಲಿ ಕೆಲವೇ ವ್ಯಾಪಾರಿಗಳು ಕುಳಿತು ವ್ಯಾಪಾರ ಮಾಡಲು ಸಾಧ್ಯವಾಗಿರುವುದರಿಂದ ವ್ಯಾಪಾರಿಗಳು ಸಂತೆಮೈದಾನಕ್ಕೆ ಹೊಂದಿಕೊಂಡಂತೆ ಇರುವ ಅಕ್ಕಪಕ್ಕದ ರಸ್ತೆಗಳಲ್ಲಿ ಅನೇಕ ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ. ನಗರಸಭೆ ಆಡಳಿತ ಕೆಲವೇ ಸ್ವಹಿತಾಸಕ್ತಿಯ ಖಾಯಂ ವ್ಯಾಪಾರಿಗಳಿಗೆ ಬೆಂಬಲ ನೀಡಿ ಬೃಹತ್ ಸಂಖ್ಯೆಯ ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಅನ್ಯಾಯ ಮಾಡಬಾರದು. ನಗರಸಭೆ ಸಿಬ್ಬಂದಿ ವ್ಯಾಪಾರಿಗಳನ್ನು ಹೆದರಿಸಿ, ಬ್ಯಾರಿಕೇಡ್‌ಗಳನ್ನು ಹಾಕಿ ಟ್ರ್ಯಾಕ್ಟರ್ ಮೂಲಕ ತರಕಾರಿ ಹೇರಿಕೊಂಡು ಹೋಗುತ್ತಿರುವ ಕ್ರಮ ಖಂಡನೀಯ ಎಂದರು.

ಸಂತೆ ವ್ಯಾಪಾರಿಗಳಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು. ಹೊಸ ಮಾರುಕಟ್ಟೆಗೆ ಸ್ಥಳಾಂತರವಾಗುವ ತನಕ ಈಗಿನ ಮಾದರಿಯಲ್ಲಿಯೇ ರಸ್ತೆ ಅಂಚಿನಲ್ಲಿ ವ್ಯಾಪಾರ ಮಾಡುತ್ತಿರುವವರಿಗೆ ವ್ಯಾಪಾರ ನಡೆಸಲು ಅನುಕೂಲ ಕಲ್ಪಿಸಬೇಕು.

ಹೊಸ ಸಂತೆ ಮಾರುಕಟ್ಟೆಯಲ್ಲಿ ಸ್ಥಳಾವಕಾಶ ಕಡಿಮೆಯಾದರೆ ಕೆರೆ ಏರಿಮೇಲೆ ಇರುವ ಜಾಗದಲ್ಲಿ ರೈತರಿಗೆ ಹಾಗೂ ಸಣ್ಣ ವ್ಯಾಪಾರಿಗಳಿಗೆ ಸ್ಥಳಾವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕ ಹಿತಕರ ಜೈನ್, ಸಂತೋಷ್, ದುರ್ಗಪ್ಪ ಬರದವಳ್ಳಿ, ತಿಮ್ಮಪ್ಪ ಯಲಕುಂದ್ಲಿ, ಸತ್ಯನಾರಾಯಣ, ಅಶೋಕ್ ಕೋಗಾರ್, ಚಿದಾನಂದ ಬಳಸಗೋಡು, ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X