Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ವರು ಗಂಡಂದಿರಿಗೆ ಮೋಸ ಮಾಡಿರುವ...

ನಾಲ್ವರು ಗಂಡಂದಿರಿಗೆ ಮೋಸ ಮಾಡಿರುವ ಮಹಿಳೆ ಪೊಲೀಸರ ಅತಿಥಿ

ವಾರ್ತಾಭಾರತಿವಾರ್ತಾಭಾರತಿ18 Dec 2016 11:15 AM IST
share
ನಾಲ್ವರು ಗಂಡಂದಿರಿಗೆ ಮೋಸ ಮಾಡಿರುವ ಮಹಿಳೆ ಪೊಲೀಸರ ಅತಿಥಿ

ನೊಯ್ಡ, ಡಿ.18: ಗಂಡಸರು ಹಲವು ಮದುವೆಯಾಗಿ ಮೋಸ ಮಾಡುವುದು ನಾವೆಲ್ಲಾ ಕೇಳಿದ್ದೇವೆ, ನೋಡಿದ್ದೇವೆ. ಆದರೆ, ಇಲ್ಲೊಬ್ಬ ಸುಂದರ ಮಹಿಳೆ ಬಾಲಿವುಡ್ ಸಿನೆಮಾ ‘ಡೋಲಿ ಕಿ ಡೊಲಿ’ ಚಿತ್ರದಲ್ಲಿನ ಸೋನಂ ಕಪೂರ್ ರೀತಿ ನಿಜಜೀವನದಲ್ಲಿ ನಾಲ್ವರು ಗಂಡಂದರಿಗೆ ಮೋಸ ಮಾಡಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ.

ನಾಲ್ವರು ಗಂಡಸರನ್ನು ಮದುವೆಯಾಗಿ ಕೈಕೊಟ್ಟು, ಇತರ 11 ಜನರಿಗೆ ಮೋಸ ಮಾಡಿರುವ 28ರ ಪ್ರಾಯದ ಮೋಸಗಾತಿ ಮಹಿಳೆ ಮೇಘಾ ಭಾರ್ಗವ್ ಎಂಬಾಕೆಯನ್ನು ನೊಯ್ಡಾ ಹಾಗೂ ಕೇರಳದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೀಗೆ...

ಅಕ್ಟೋಬರ್‌ನಲ್ಲಿ ಕೇರಳದ ಲಾರೆನ್ ಜಸ್ಟಿನ್ ಎಂಬುವವರು ತನ್ನ ಪತ್ನಿ ಮೇಘಾ ಮದುವೆಯಾದ ಕೆಲವೇ ಸಮಯದ ಬಳಿಕ 15 ಲಕ್ಷ ರೂ. ಒಡವೆಗಳೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಕೇರಳದ ಕೊಚ್ಚಿಯಲ್ಲಿ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

 ಕೇರಳ ಪೊಲೀಸ್ ತಂಡ ನೊಯ್ಡ ಪೊಲೀಸರ ಜೊತೆಗೂಡಿ ಎರಡು ತಿಂಗಳ ತನಿಖೆಯ ಬಳಿಕ ಆರೋಪಿ ಮೇಘಾ ಭಾರ್ಗವ್, ಆಕೆಯ ಸಹೋದರಿ ಪ್ರಾಚಿ ಹಾಗೂ ಆಕೆಯ ಭಾವ ದೇವೇಂದ್ರ ಶರ್ಮರನ್ನು ಅಮರಪಾಲಿ ರೊಡಿಯಕ್ ಸೊಸೈಟಿಯ ಸೆಕ್ಟರ್ 20 ರಲ್ಲಿ ಬಂಧಿಸಿದ್ದರು.

  ಜಸ್ಟಿನ್ ಅವರು ಮೇಘಾಗೆ ಮೋಸ ಹೋದ ಕೇರಳದ ನಾಲ್ಕನೆ ವ್ಯಕ್ತಿ ಎಂದು ಕೇರಳದ ಪೊಲೀಸರು ಬಹಿರಂಗಪಡಿಸಿದ್ದಾರೆ. ಮೇಘಾ ಈ ಹಿಂದೆ ಮೂವರು ವ್ಯಕ್ತಿಗಳನ್ನು ಮದುವೆಯಾಗಿ ಮೋಸ ಮಾಡಿದ್ದಾಳೆ. ಜಸ್ಟಿನ್ ಪೊಲೀಸರಿಗೆ ದೂರು ನೀಡಿದ ಕಾರಣ ಮೇಘಾಳ ಮೋಸದಾಟ ಬೆಳಕಿಗೆ ಬಂದಿದೆ.

ಶ್ರೀಮಂತ ಕುಟುಂಬದಿಂದ ಬಂದಿರುವ, ನೋಡಲು ಸುಂದರವಾಗಿರುವ ಆರೋಪಿ ಮೇಘಾ ಭಾರ್ಗವಿಯು ವಿಚ್ಛೇದಿತ ಗಂಡಸರು, ವಿಕಲಚೇತನರು ಹಾಗೂ ಕಪ್ಪು ಬಣ್ಣದ ಶ್ರೀಮಂತ ಗಂಡಸರನ್ನೇ ಟಾರ್ಗೆಟ್ ಮಾಡುತ್ತಿದ್ದಳು. ಮದುವೆಯ ಬಳಿಕ ಸ್ವಲ್ಪ ಸಮಯ ಗಂಡನ ಜೊತೆ ಇರುವ ಈಕೆ ಒಂದು ದಿನ ಸಮಯಸಾಧಿಸಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದಳು. ಈಕೆಯ ಕೃತ್ಯಕ್ಕೆ ಆಕೆಯ ಭಾವ ಸಾಥ್ ನೀಡುತ್ತಿದ್ದ. ಮೇಘಾ ಭಾರ್ಗವಿ ನೋಡಲು ಸುಂದರವಾಗಿದ್ದ ಕಾರಣ ಗಂಡಸರು ಆಕೆ ಬೀಸಿದ ಬಲೆಗೆ ಸುಲಭವಾಗಿ ಬೀಳುತ್ತಿದ್ದರು ಎಂದು ಕೇರಳ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಂದ್ರ ತಿಳಿಸಿದ್ದಾರೆ.

ಮೇಘಾಳ ಬಂಧನದ ಆಕೆ ಇಂದೋರ್‌ನ ನಿವಾಸಿ, ಜಸ್ಟಿನ್ ಸಹಿತ ನಾಲ್ವರು ವ್ಯಕ್ತಿಗಳನ್ನು ಮದುವೆಯಾಗಿ, 11 ಮಂದಿಗೆ ಮೋಸ ಮಾಡಿರುವುದು ಕಂಡು ಬಂದಿದೆ. ಮೇಘಾಳನ್ನು ವರ್ಗಾವಣೆ ರಿಮಾಂಡ್‌ನ ಮೇಲೆ ಕೊಚ್ಚಿಗೆ ಕರೆತರಲಾಗಿದ್ದು, ಅಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X