ಪ್ರವಾಸಕ್ಕೆ ಹೋಗುತ್ತಿದ್ದ ಸರಕಾರಿ ಬಸ್ ಪಲ್ಟಿ
ಪ್ರಾಣಾಪಾಯದಿಂದ ವಿದ್ಯಾಥಿ೯ಗಳು ಪಾರು
ಬೆಳಗಾವಿ, ಡಿ.18: ಪ್ರವಾಸಕ್ಕೆ ಹೋಗುತ್ತಿದ್ದ ಸರಕಾರಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ವಿದ್ಯಾಥಿ೯ಗಳು ಗಾಯಗೊಂಡ ಘಣನೆ ರಾಯಭಾಗ ಪಟ್ಟಣ ಹೊರವಲಯದಲ್ಲಿ ನಡೆದಿದೆ.
ಬಿರಡಿ ಗ್ರಾಮದ ಖಾಸಗಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶಾಲಾ ಪ್ರವಾಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್ ನಲ್ಲಿ 50 ವಿದ್ಯಾರ್ಥಿ ಗಳು ಪ್ರಯಾಣಿಸುತ್ತಿದ್ದರು. ಈ ವೇಳೆ ಗಾಯಗೊಂಡ ಮಕ್ಕಳನ್ನು ರಾಯಬಾಗ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಸ್ಥಳಕ್ಕೆ ರಾಯಬಾಗ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





