Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿಡ್ಡಳ್ಳಿ ಹಾಡಿಯಲ್ಲಿ ಬೃಹತ್ ಸಂಕಲ್ಪ...

ದಿಡ್ಡಳ್ಳಿ ಹಾಡಿಯಲ್ಲಿ ಬೃಹತ್ ಸಂಕಲ್ಪ ದಿನ ಹೋರಾಟ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ18 Dec 2016 12:20 PM IST
share
ದಿಡ್ಡಳ್ಳಿ ಹಾಡಿಯಲ್ಲಿ ಬೃಹತ್ ಸಂಕಲ್ಪ ದಿನ ಹೋರಾಟ ಪ್ರಾರಂಭ

ಸಿದ್ದಾಪುರ, ಡಿ.18: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ದಿಡ್ಡಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದ ಗಿರಿಜನರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸಿದ ನಂತರ ಅಶ್ರು ಶಾಲೆ ಸಮೀಪ ನಿರಾಶ್ರಿತರಾಗಿರುವ ಆದಿವಾಸಿಗಳ ಆಹೋರಾತ್ರಿ ಹೋರಾಟ 13ನೆ ದಿನಕ್ಕೆ ಕಾಲಿಟ್ಟಿದೆ. ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಬೃಹತ್ ಸಂಕಲ್ಪ ದಿನ ಹೋರಾಟ ಪ್ರಾರಂಭವಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ನೂರಾರು ಹೋರಾಟಗಾರರು ಸಂಕಲ್ಪ ದಿನ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಹಾಡಿಯ ರಸ್ತೆ ಉದ್ದಕ್ಕೂ ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ, ಆದಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಅರಣ್ಯ ಇಲಾಖೆ ಹಾಗೂ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆಗಳ ಭಿತ್ತಿ ಪತ್ರಗಳು ರಾರಾಜಿಸುತ್ತಿದೆ. ನೂರಾರು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿರುವುದು ಕಂಡು ಬಂದಿದೆ.

ಹೋರಾಟದಲ್ಲಿ ಹಿರಿಯ ಹೋರಾಟಗಾರ ಹಾಗೂ ವಿಧಾನ ಪರಿಷತ್ ಸದಸ್ಯ ಎ.ಕೆ ಸುಬ್ಬಯ್ಯ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಮುಖಂಡರಾದ ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಶ್ರೀನಿವಾಸ್, ಮಂಜು, ನಿರ್ವಾಹಣಪ್ಪ, ಚಲೋ ಉಡುಪಿ ಹೋರಾಟದ ಪ್ರಮುಖರಾದ ಭಾಸ್ಕರ್ ರಾವ್, ಗೌರಿ, ಸಾಹಿತಿ ಡಾ.ವಿಜಯ, ವಿಶ್ವ ಮಾನವ ಹಕ್ಕುಗಳ ಸೇವಾ ಆಯೋಗದ ರಾಜ್ಯ ಅಧ್ಯಕ್ಷ ಸಿದ್ದಲಿಂಗಯ್ಯ ಗೌಡ, ಪರಿಸರ ಹೋರಾಟಗಾರ ಮಹೇಂದ್ರ, ಶಿವಮೊಗ್ಗ ವಿಶ್ವ ವಿದ್ಯಾನಿಲಯದ ಕಿರಣ್ ಗಾಜನೂರು, ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ. ಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಆರ್.ಬಾಲಾಜಿ, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಹೇಮಂತ್, ಆದಿವಾಸಿ ಮುಖಂಡರಾದ ಅಪ್ಪಾಜಿ, ಮುತ್ತಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದು, ಮಧ್ಯಾಹ್ನದ ನಂತರ  ಹೋರಾಟ ಇನ್ನಷ್ಟು ತೀವ್ರತೆ ಪಡೆಯುವ ಸಾಧ್ಯತೆ ಕಂಡು ಬರುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X