ಶಾಲೆಗೆ ಹೋಗುವಂತೆ ಒತ್ತಾಯಿಸಿದ ಪೋಷಕರ ಒತ್ತಡದಿಂದ ಮನನೊಂದು ಬಾಲಕಿ ಆತ್ಮಹತ್ಯೆ
ಚಿತ್ರದುರ್ಗ, ಡಿ.18: ಶಾಲೆಗೆ ಹೋಗುವಂತೆ ಒತ್ತಾಯಿಸಿದ ಪೋಷಕರ ಒತ್ತಡದಿಂದ ಮನವೊಂದು ಬಾಲಕಿಯೋರ್ವಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇತನಹಟ್ಟಿ ಗ್ರಾಮದಲ್ಲಿ ನಡೆದಿದೆ.
ರೂಪ (11) ಮೃತ ಅಪ್ರಾಪ್ತ ಬಾಲಕಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೇವಂತಿಗೆ ಬೆಳೆಗೆ ಸಿಂಪಡಿಸಲು ತಂದಿದ್ದ ವಿಷ ಸೇವಿಸಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
Next Story





