ಧರ್ಮಸ್ಥಳದ ಬೋಳಿಯಾರ್ ನಲ್ಲಿ ಕೆಎಸ್ಸಾರ್ಟಿಸಿ ಮತ್ತು ಟೂರಿಸ್ಟ್ ಕಾರು ಢಿಕ್ಕಿ

ಧರ್ಮಸ್ಥಳ, ಡಿ.18: ಇಲ್ಲಿನ ಬೋಳಿಯಾರ್ ಸಮೀಪ ಕೆಎಸ್ಸಾರ್ಟಿಸಿ ಹಾಗೂ ಟೂರಿಸ್ಟ್ ಕಾರೊಂದು ಢಿಕ್ಕಿಯಾದ ಘಟನೆ ಇಂದು ನಡೆದಿದೆ.
ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೂರಿಸ್ಟ್ ಕಾರು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





