ಮೋದಿ ಬಹಿರಂಗ ಸಭೆಯ ಹೋರ್ಡಿಂಗ್‌ಗೆ ಬೆಂಕಿ

ಕಾನ್ಪುರ,ಡಿ.18: ಸೋಮವಾರ ಇಲ್ಲಿ ಆಯೋಜಿಸಲಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಬಹಿರಂಗ ಸಭೆಗೆ ಸಂಬಂಧಿಸಿದಂತೆ ಸರ್ವೋದಯ ನಗರದಲ್ಲಿ ಹಾಕಲಾಗಿದ್ದ ಹೋರ್ಡಿಂಗ್‌ನ್ನು ನಿನ್ನೆ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಘಟನೆಯ ಕುರಿತು ಮುಖ್ಯಮಂತ್ರಿಗಳು ಹಾಗೂ ಪ್ರಧಾನಿಯವರ ಕಚೇರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಂದ್ರ ಮೈಥನಿ ಅವರು ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮೋದಿಯವರು ನಾಳೆ ಮಧ್ಯಾಹ್ನ ನಿರಾಲಾ ನಗರ ರೈಲ್ವೆ ಮೈದಾನದಲ್ಲಿ ಆಯೋಜಿಸ ಲಾಗಿರುವ ಪರಿವರ್ತನ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದು, ಅದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ತನ್ಮಧ್ಯೆ ಕಾಂಗ್ರೆಸ್ ಪಕ್ಷವು ನೋಟು ರದ್ದತಿಯನ್ನು ವಿರೋಧಿಸಿ ಇಂದಿಲ್ಲಿ ಪ್ರತಿಭಟನೆ ಯನ್ನು ನಡೆಸಿತು.
Next Story





