Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಡಳಿತ ಪಕ್ಷದ ನಿಲುವನ್ನು ವಿರೋಧಿಸಿದರೆ...

ಆಡಳಿತ ಪಕ್ಷದ ನಿಲುವನ್ನು ವಿರೋಧಿಸಿದರೆ ರಾಷ್ಟ್ರವಿರೋಧಿ ಕೃತ್ಯವೇ? : ನಟ ಪವನ್ ಕಲ್ಯಾಣ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ18 Dec 2016 10:47 PM IST
share
ಆಡಳಿತ ಪಕ್ಷದ ನಿಲುವನ್ನು ವಿರೋಧಿಸಿದರೆ ರಾಷ್ಟ್ರವಿರೋಧಿ ಕೃತ್ಯವೇ? : ನಟ ಪವನ್ ಕಲ್ಯಾಣ್ ಪ್ರಶ್ನೆ

ಹೈದರಾಬಾದ್, ಡಿ.18: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ನಿಲುವನ್ನು ವಿರೋಧಿಸಿದರೆ ಅದನ್ನು ರಾಷ್ಟ್ರವಿರೋಧಿ ಕೃತ್ಯವೆನ್ನಲು ಸಾಧ್ಯವಿಲ್ಲ ಎಂದು ಖ್ಯಾತ ತೆಲುಗು ನಟ ಮತ್ತು ಜನಸೇವಾ ಪಕ್ಷದ ಮುಖಂಡ ಪವನ್ ಕಲ್ಯಾಣ್ ಹೇಳಿದ್ದಾರೆ.

 ದೇಶಭಕ್ತಿ ವಿಷಯದಲ್ಲಿ ಬಿಜೆಪಿ ಪಕ್ಷದ ಧೋರಣೆಯನ್ನು ಅವರು ಕಟುವಾಗಿ ಟೀಕಿಸಿ ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ಬಿಜೆಪಿಯವರು ಕೈಬಿಡಬೇಕು. ಇಲ್ಲವಾದರೆ ಜೆಎನ್‌ಯು ವಿದ್ಯಾರ್ಥಿಯ ಪ್ರಕರಣದಲ್ಲಿ ಆದಂತೆ ಇದು ಬಿಜೆಪಿಯವರಿಗೇ ತಿರುಗು ಬಾಣವಾದೀತು ಎಂದು ಪವನ್ ಹೇಳಿದರು.

ಒಂದು ಪಕ್ಷವೊಂದರ ಸಿದ್ಧಾಂತವನ್ನೇ ರಾಷ್ಟ್ರಭಕ್ತಿ ಎನ್ನಲಾಗದು ಎಂದ ಅವರು, ಸಿನೆಮಾ ಮಂದಿರಗಳಲ್ಲಿ ಸಿನೆಮಾ ಪ್ರದರ್ಶನಕ್ಕೆ ಮುನ್ನ ರಾಷ್ಟ್ರಗೀತೆ ಪ್ರಸಾರ ಮಾಡಬೇಕು ಎನ್ನುವ ಆದೇಶವನ್ನು ಟೀಕಿಸಿದರು. ಜನರು ತಮ್ಮ ಕುಟುಂಬದವರು ಅಥವಾ ಸ್ನೇಹಿತರೊಂದಿಗೆ ಸಂತೋಷದಿಂದ ಕಾಲ ಕಳೆಯಲು ಥಿಯೇಟರ್‌ಗೆ ತೆರಳುತ್ತಾರೆ. ಆದರೆ ಇದನ್ನು ಅವರ ರಾಷ್ಟ್ರಭಕ್ತಿ ಪರೀಕ್ಷಾ ಕೇಂದ್ರ ಎಂದು ಪರಿಗಣಿಸಬಾರದು ಎಂದವರು ಹೇಳಿದರು.

ರಾಜಕೀಯ ಪಕ್ಷಗಳ ಸಭೆ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಪ್ರಸಾರ ಕಡ್ಡಾಯ ಯಾಕೆ ಮಾಡಬಾರದು ಎಂದು ಪ್ರಶ್ನಿಸಿದ ಅವರು, ಜನರಿಗೆ ಕಾನೂನು ಬೋಧಿಸುವವರು ಇತರರಿಗೆ ಮೇಲ್ಪಂಕ್ತಿಯಾಗಿ ನಿಲ್ಲಬೇಕು. ಕೇವಲ ಸಹಿ ಹಾಕುವ ಕೇಂದ್ರವಾಗಬಾರದು ಎಂದರು.

 2014ರ ಚುನಾವಣೆ ವೇಳೆ ಜನಸೇವಾ ಪಕ್ಷವನ್ನು ಹುಟ್ಟುಹಾಕಿದ್ದ ಪವನ್, ಬಿಜೆಪಿ- ಟಿಡಿಪಿ ಮೈತ್ರಿಕೂಟದ ಪರ ಪ್ರಚಾರ ಮಾಡಿದ್ದರು. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಮೈತ್ರಿಕೂಟವು ಚುನಾವಣೆ ಸಂದರ್ಭ ನೀಡಿದ್ದ ಭರವಸೆ ಈಡೇರಿಸಲು ವಿಫಲವಾದ ಕಾರಣ ಅದನ್ನು ಬೆಂಬಲಿಸದಿರಲು ನಿರ್ಧರಿಸಿದ್ದರು. ದನದ ಮಾಂಸ ನಿಷೇಧ ಮತ್ತು ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಪ್ರಕರಣದಲ್ಲಿ ಬಿಜೆಪಿ ವಿರುದ್ಧ ಕಳೆದ ಕೆಲ ದಿನಗಳಿಂದ ನಿರಂತರ ಟೀಕಾ ಪ್ರಹಾರ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X