Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ಟೀಕಿಸಿದ ವ್ಯಕ್ತಿಗೆ...

ನೋಟು ರದ್ದತಿ ಟೀಕಿಸಿದ ವ್ಯಕ್ತಿಗೆ ಹಲ್ಲೆ, ಹಣ ಲೂಟಿ

ಬಳಿಕ ಆತ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ19 Dec 2016 9:09 AM IST
share
ನೋಟು ರದ್ದತಿ ಟೀಕಿಸಿದ ವ್ಯಕ್ತಿಗೆ ಹಲ್ಲೆ, ಹಣ ಲೂಟಿ

ಹೊಸದಿಲ್ಲಿ, ಡಿ.19: ಕೇಂದ್ರ ಸರಕಾರದ ನೋಟು ರದ್ದತಿ ನಿರ್ಧಾರವನ್ನು ಟೀಕಿಸಿದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಆಗ್ನೇಯ ದಿಲ್ಲಿಯ ಜೈತಪುರ ಪ್ರದೇಶದಲ್ಲಿ ನಡೆದಿದೆ. ಡಿಸೆಂಬರ್ 15ರಂದು ನಡೆದ ಹಲ್ಲೆಯಿಂದ ಲಲ್ಲನ್‌ಸಿಂಗ್ ಖುಷ್ವಾಹ ಅವರ ತಲೆಗೆ ಗಂಭೀರ ಗಾಯಗಳಾಗಿವೆ.

ಟೆಲಿವಿಷನ್ ಖರೀದಿಸಲು ಹೋಗುತ್ತಿದ್ದಾಗ, ಕೇಂದ್ರದ ನಿರ್ಧಾರ ವಿರುದ್ಧ ಇವರು ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಆರೋಪಿ ಅಶೀಕ್‌ನನ್ನು ಬಂಧಿಸಲಾಗಿದೆ.

ಖುಷ್ವಾಹ ವೃತ್ತಿಯಲ್ಲಿ ಪೈಂಟರ್ ಆಗಿದ್ದು, ಮಕ್ಕಳ ಕೋರಿಕೆ ಮೇರೆಗೆ ಟೆಲಿವಿಷನ್ ಖರೀದಿಸಲು ಬಯಸಿದ್ದರು. "ನಾನು ಎಟಿಎಂ ಸರದಿಯಲ್ಲಿ ನಿಂತಿರಲಿಲ್ಲ. ಆದರೆ ಸರದಿಯನ್ನು ನೋಡಿದಾಗ, ಬಡವರು ಮಾತ್ರ ತೊಂದರೆ ಅನುಭವಿಸುತ್ತಿರುವುದು ನನ್ನ ಗಮನಕ್ಕೆ ಬಂತು. ಇದರಿಂದಾಗಿ ನೋಟು ರದ್ದತಿ ನಿರ್ಧಾರವನ್ನು ನಾನು ಟೀಕಿಸಿದೆ. ತಕ್ಷಣ ಅಂಗಡಿಯಲ್ಲಿ ಒಬ್ಬ ನನ್ನನ್ನು ನಿಂದಿಸಲು ತೊಡಗಿದ. ಅದಕ್ಕೆ ಕಾರಣ ಕೇಳಿದಾಗ, ನನ್ನ ಮೇಲೆ ಹಲ್ಲೆ ನಡೆಸಿ, ಪ್ರಧಾನಿಯನ್ನು ನೀನು ಹೇಗೆ ಟೀಕಿಸಿದೆ ಎಂದು ಪ್ರಶ್ನಿಸಿದ. ತಕ್ಷಣ ಇತರರೂ ಆತನ ಜತೆಗೆ ಸೇರಿಕೊಂಡರು. ನನ್ನ ತಲೆಗೆ ಗಾಯವಾಗಿ ರಕ್ತ ಸುರಿಯಲಾರಂಭಿಸಿತು" ಎಂದು ಘಟನೆಯನ್ನು ವಿವರಿಸಿದರು.

ಕೆಲವರು ಮಧ್ಯಪ್ರವೇಶಿಸಿದ್ದರಿಂದಾಗಿ ತಾನು ಪಾರಾಗುವುದು ಸಾಧ್ಯವಾಯಿತು ಎಂದು ಖುಷ್ವಾಹ ಹೇಳಿಕೊಂಡಿದ್ದಾರೆ. "ತಕ್ಷಣ ನನ್ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ನನ್ನ ತಲೆಗೆ ಹೊಲಿಗೆ ಹಾಕಿದರು. ನಾನು ಯಾವ ತಪ್ಪೂ ಮಾಡಿಲ್ಲ ಎಂಬ ಭಾವನೆ ನನ್ನಲ್ಲಿ ಈಗಲೂ ಇದೆ. ಹಲ್ಲೆ ಮಾಡಿದ ವ್ಯಕ್ತಿಗಳು ನನ್ನಿಂದ 6000 ರೂಪಾಯಿ ಕಿತ್ತುಕೊಂಡಿದ್ದಾರೆ. ನನ್ನ ಚಿಕಿತ್ಸೆಗಾಗಿ ನಾನು ಸಾಲ ಪಡೆಯಬೇಕಾಯಿತು. ಹಲವು ದಿನ ಕೂಲಿ ಕೆಲಸ ಮಾಡಲು ಸಾಧ್ಯವಾಗದೇ ನನ್ನ ಕೂಲಿ ಕೂಡಾ ನಷ್ಟವಾಗಿದೆ. ಕುಟುಂಬ ನಿರ್ವಹಣೆ ಹೇಗೆ ಎನ್ನುವುದೇ ನನ್ನ ಚಿಂತೆ" ಎಂದು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 323 ಹಾಗೂ 341ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X