Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಿಂದ...

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಿಂದ ಮತದಾರರಿಗೆ ಲಂಚ ಪಡೆಯಲು ಪ್ರಚೋದನೆ !

ವಾರ್ತಾಭಾರತಿವಾರ್ತಾಭಾರತಿ19 Dec 2016 5:28 PM IST
share
ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಿಂದ ಮತದಾರರಿಗೆ ಲಂಚ ಪಡೆಯಲು ಪ್ರಚೋದನೆ !

ಹೊಸದಿಲ್ಲಿ,ಡಿ.19: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರಾವ್‌ಸಾಹೇಬ ದಾನ್ವೆ ಪಾಟೀಲ್ ವಿರುದ್ಧ ಮತದಾರರನ್ನು ಲಂಚ ಪಡೆಯಲು ಪ್ರೇರೇಪಿಸಿದ ಆರೋಪ ಕೇಳಿ ಬಂದಿದೆ. ಮಹಾರಾಷ್ಟ್ರದ ನಿಗಮಗಳಿಗೆ ನಡೆದ ಚುನಾವಣೆ ವೇಳೆ ಔರಂಗಾಬಾದ್‌ನಲ್ಲಿ ಮತದಾರರನ್ನು ದಾನವೆ ವೋಟಿಗಾಗಿ ನೋಟು ಸ್ವೀಕರಿಸುವಂತೆ ಪ್ರರೇಪಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ವಿರೋಧ ಪಕ್ಷಗಳು ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಎಂದು ಆರೋಪಿಸುತ್ತಿವೆ ಎಂದು ವರದಿಯಾಗಿದೆ.

ಕಳೆದ ರವಿವಾರ ಮಹಾರಾಷ್ಟ್ರ ನಿಗಮಗಳಿಗೆ ಚುನಾವಣೆ ನಡೆದಿತ್ತು. ಈಗ ವೈರಲ್ ಆಗಿರುವ ವೀಡಿಯೊದಲ್ಲಿ ದಾನ್ವೆ "ಇಂದು ಡಿಸೆಂಬರ್ ಹದಿನೇಳು ಆಗಿದೆ. ನಾಳೆ ಡಿಸೆಂಬರ್ ಹದಿನೆಂಟು. ನಿಮಗೆಲ್ಲರಿಗೂ ಮನೆಗೆ ಹೋಗಲು ಬೇಸರವಾಗುತ್ತಿದೆಯೆಂದು ನನಗೆ ಗೊತ್ತು. ಚುನಾವಣೆ ನಡೆಯುವ ಹಿಂದಿನ ದಿವಸದ ಸಂಜೆಯಂತೂ ಬಹಳ ಮಹತ್ವಪೂರ್ಣದ್ದು. ಯಾಕೆಂದರೆ ಅಂದು ನಿಮಗೆ ಅನಿರೀಕ್ಷಿತವಾಗಿ ಲಕ್ಷ್ಮಿಯ ದರ್ಶನವಾಗಲಿದೆ. ಒಂದು ವೇಳೆ ಇಂತಹ ಲಕ್ಷ್ಮೀ ನಿಮ್ಮ ಮನೆಬಾಗಿಲಿಗೆ ಬಂದರೆ ಅದನ್ನು ಸ್ವಾಗತಿಸಿರಿ. ಆದರೆ ವೋಟು ನೀಡುವ ನಿಮ್ಮ ನಿರ್ಧಾರದಲ್ಲಿ ಮಾತ್ರ ಗಟ್ಟಿಯಾಗಿರಿ" ಎಂದು ಹೇಳುತ್ತಿರುವ ದೃಶ್ಯ ವೀಡಿಯೊದಲ್ಲಿದೆ.

ಲಂಚಕ್ಕೆ ಲಕ್ಷ್ಮಿ ಎಂಬ ಪದವನ್ನು ದಾನ್ವೆ ಬಳಸಿದ್ದಾರೆ ಎನ್ನಲಾಗಿದ್ದು, ಪೈಟನ್‌ನಲ್ಲಿ ನಡೆದಿದ್ದ ರ್ಯಾಲಿಯಲ್ಲಿ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜಾ ಮುಂಢೆ ಭಾಗವಹಿಸಿದ್ದರು. ಈ ಹಿಂದೆಯೂ ದಾನ್ವೆ ವಿವಾದದ ಕೇಂದ್ರ ಬಿಂದುವಾಗಿದ್ದರು. ಕಳೆದ ನವೆಂಬರ್ 25ರ ಜಲಗಾಂವ್‌ನ ಅವರ ಚುನಾವಣಾ ಪ್ರಚಾರ ಭಾಷಣ ಕೂಡಾ ವಿವಾದಾಸ್ಪದವಾಗಿತ್ತು ಎಂದು ವರದಿ ತಿಳಿಸಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X