ರೊಜಾರಿಯೊ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ಡಿ.19: ರೊಜಾರಿಯೊ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಸಂಸ್ಥೆಯ ಸಂಚಾಲಕ ಫಾ.ಜೆ.ಬಿ.ಕ್ರಾಸ್ತರ ಅಧ್ಯಕ್ಷತೆಯಲ್ಲಿ ಜರಗಿತು.
ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್ ಹಾಗೂ ಮಂಗಳೂರು ಅಪರಾಧ ಪತ್ತೆ ದಳದ ಡಿವೈಎಸ್ಪಿ ವೆಲೆಂಟನ್ ಡಿಸೋಜ ಕ್ರೀಡಾಕೂಟ ಉದ್ಘಾಟಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ಫಾ.ರೋಕಿ ಫೆರ್ನಾಂಡಿಸ್ ಸ್ವಾಗತಿಸಿದರು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿನ್ಸೆಂಟ್ ಡಿಸೋಜ, ಪ್ರೌಢಶಾಲಾ ಮುಖ್ಯ ಶಿಕ್ಷಕ ಅಲೋಶಿಯಸ್ ಡಿಸೋಜ, ಪ್ರಾಥಮಿಕ ಶಾಲೆಯ ಮುಖ್ಯಸ್ಥೆ ಜೆನೆಟ್ ಫೆರ್ನಾಂಡಿಸ್, ಸಿಸ್ಟರ್ ಆ್ಯಂಟನಿ ಮೇರಿ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಶಾರೀರಿಕ ನಿರ್ದೇಶಕ ಕಾರಿಯಪ್ಪ ರೈ, ಜಾನ್ ಲೋಬೊ, ರೋಹಿತ್ ಮತ್ತಿತರರು ಉಪಸ್ಥಿತರಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.
Next Story





