Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿಡ್ಡಳ್ಳಿ ನಿರಾಶ್ರಿತರಿಗೆ ಮೂರು...

ದಿಡ್ಡಳ್ಳಿ ನಿರಾಶ್ರಿತರಿಗೆ ಮೂರು ತಿಂಗಳಿನಲ್ಲಿ ನಿವೇಶನ : ಸಚಿವ ಸೀತಾರಾಂ ಭರವಸೆ

ಧರಣಿಯನ್ನು ಮುಂದುವರಿಸಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ19 Dec 2016 8:41 PM IST
share
ದಿಡ್ಡಳ್ಳಿ ನಿರಾಶ್ರಿತರಿಗೆ ಮೂರು ತಿಂಗಳಿನಲ್ಲಿ ನಿವೇಶನ : ಸಚಿವ ಸೀತಾರಾಂ ಭರವಸೆ

ಮಡಿಕೇರಿ ಡಿ.19 : ಗುಡಿಸಲುಗಳನ್ನು ಕಳೆದುಕೊಂಡು ಸೂಕ್ತ ನೆಲೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ದಿಡ್ಡಳ್ಳಿ ಗಿರಿಜನ ಕುಟುಂಬಗಳಿಗೆ ಮುಂದಿನ ಮೂರು ತಿಂಗಳ ಒಳಗಾಗಿ ಸೂಕ್ತ ಜಾಗವನ್ನು ಗುರುತಿಸಿ ನಿವೇಶನ ಒದಗಿಸಿಕೊಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಭರವಸೆ ನೀಡಿದ್ದಾರೆ.

 ಪ್ರತಿಭಟನಾ ನಿರತ ನಿರಾಶ್ರಿತ ಆದಿವಾಸಿಗಳೊಂದಿಗೆ ಚರ್ಚಿಸಿದ ಸಚಿವರು ಮುಂದಿನ ಮೂರು ತಿಂಗಳಿನಲ್ಲಿ ದಿಡ್ಡಳ್ಳಿ ವ್ಯಾಪ್ತಿಯಲ್ಲೆ ನಿವೇಶನ ಒದಗಿಸಿ ಕೊಡುವ ಭರವಸೆ ನೀಡಿದರು. ಆದರೆ ಹೋರಾಟಗಾರರು ಈ ಭರವಸೆಗೆ ಆಕ್ಷೇಪ ವ್ಯಕ್ತಪಡಿಸಿ, ಈ ರೀತಿಯ ಅನೇಕ ಭರವಸೆಗಳು ಹುಸಿಯಾಗಿವೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದ ಸಚಿವರು, ಗುಡಿಸಲುಗಳಿದ್ದ ಪ್ರದೇಶವನ್ನು ಅರಣ್ಯ ಇಲಾಖೆ ಮೀಸಲು ಅರಣ್ಯ ಪ್ರದೇಶವೆಂದು ಹೇಳುತ್ತಿದೆ. ಆದ್ದರಿಂದ ಈ ಜಾಗ ಅರಣ್ಯ ಇಲಾಖೆಗೆ ಸೇರಿದ್ದೆ ಅಥವಾ ಕಂದಾಯ ಇಲಾಖೆಯದ್ದೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳಲು ಕಾಲಾವಕಾಶದ ಅಗತ್ಯವಿದೆ. ಅಲ್ಲದೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲು ಕಂದಾಯ ಸಚಿವರು, ಅರಣ್ಯ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ನಿವೇಶನ ಮಂಜೂರಾತಿಗೆ ಸಂಬಂಧಿಸಿದಂತೆ ಎದುರಾಗಬಹುದಾದ ಕಾನೂನಾತ್ಮಕ ತೊಡಕುಗಳನ್ನು ದೂರ ಮಾಡಲು ಆದ್ಯತೆ ನೀಡಲಾಗುವುದೆಂದು ತಿಳಿಸಿದರು.

ಮೂರು ತಿಂಗಳ ಒಳಗೆ ಇದೇ ಪ್ರದೇಶದಲ್ಲಿ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ಹಂಚಲು ಕ್ರಮ ಕೈಗೊಳ್ಳಲಾಗವುದು ಎಂದು ಭರವಸೆ ನೀಡಿದ ಸಚಿವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
    
ಪ್ರತಿಭಟನಾ ನಿರತರು ಅಹೋರಾತ್ರಿ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವುದಿಲ್ಲ, ನಿವೇಶನ ಸಿಗುವಲ್ಲಿಯವರೆಗೆ ಇಲ್ಲಿಯೇ ಇರುತ್ತೇವೆಂದು ಪಟ್ಟು ಹಿಡಿದರು. ಈ ಸಂದರ್ಭ ಮಾತನಾಡಿದ ಸಚಿವರು ಮುಂದಿನ ಮೂರು ತಿಂಗಳ ಕಾಲ ಪ್ರಸ್ತುತ ಪ್ರದೇಶದಲ್ಲಿ ತಾತ್ಕಾಲಿಕ ಶೆಡ್ಡ್‌ಗಳನ್ನು ಮತ್ತು ನಿರಾಶ್ರಿತರಿಗೆ ಪಡಿತರ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

 ಸಂಸದ ಪ್ರತಾಪ ಸಿಂಹ ಮಾತನಾಡಿ, ಪ್ರತಿಭಟನಾಕಾರರು ಗುಡಿಸಲುಗಳು ಇದ್ದ ಪ್ರದೇಶದಲ್ಲೆ ನಿವೇಶನ ಬೇಕೆಂದು ಪಟ್ಟು ಹಿಡಿದಿದ್ದಾರೆ. ಆದರೆ, ಇದು ಅರಣ್ಯ ಪ್ರದೇಶವಾಗಿರುವುದರಿಂದ ಕಾನೂನಾತ್ಮಕ ತೊಡಕುಗಳು ಎದುರಾಗಿದೆ. ರಾಜ್ಯ ಸರ್ಕಾರ ತೊಡಕುಗಳನ್ನು ದೂರ ಮಾಡಿ ನಿರಾಶ್ರಿತರಿಗೆ ವಸತಿ ನೀಡಲು ಕ್ರಮ ಕೈಗೊಳ್ಳಲಿ ಎಂದರು.
    
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ನಿವೇಶನ ಹಂಚಿಕೆ ಅಡ್ಡಿಯಾಗಿರುವ ಕಾನೂನಾತ್ಮಕ ಮತ್ತು ತಾಂತ್ರಿಕ ಅಡಚಣೆೆಗಳನ್ನು ನಿವಾರಿಸಲು ಅಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆ ನೀಡಿದರು.

ಜನಪ್ರತಿನಿಧಿಗಳ ಈ ಭರವಸೆಯ ಬಳಿಕ ಮಾತನಾಡಿದ ವಸತಿ ಮತ್ತು ನಿವೇಶನ ಹೋರಾಟ ಸಮಿತಿಯ ಸಂಚಾಲಕ ಸಿರಿಮನೆ ನಾಗರಾಜು ಹಾಗೂ ಸಿಪಿಐಎಂಎಲ್ ಪಕ್ಷದ ಪ್ರಮುಖ ನಿರ್ವಾಣಪ್ಪ ,  ಇದು ಅಸಹಾಯಕರ ಹೋರಾಟಕ್ಕೆ ಸಂದ ಗೆಲುವಾಗಿದೆಯೆಂದು ಅಭಿಪ್ರಾಯಪಟ್ಟರು. ತಕ್ಷಣಕ್ಕೆ ಭರವಸೆ ಈಡೇರದೆ ಇದ್ದರು ಇಷ್ಟು ದಿನ ಆದಿವಾಸಿಗಳನ್ನು ಮರೆತು ಕುಳಿತಿದ್ದ ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ದುಃಖವನ್ನು ಆಲಿಸುವ ಬೆಳವಣಿಗೆ ಸೃಷ್ಟಿಯಾಗಿದೆ. ಜನಪ್ರತಿನಿಧಿಗಳು ಭರವಸೆ ನೀಡಿದಾಕ್ಷಣ ಪ್ರತಿಭಟನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲವೆಂದ ಅವರು ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದರು.

ಜಿಲ್ಲೆಯಲ್ಲಿರುವ ಎಲ್ಲಾ ಆದಿವಾಸಿಗಳಿಗೆ ನಿವೇಶನ ನೀಡಬೇಕೆಂದು ಅವರು ಇದೇ ಸಂದರ್ಭ ಒತ್ತಾಯಿಸಿದರು.

ಡಿ.22 ರಂದು ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆ ಬಗ್ಗೆ ಮಂಗಳವಾರ ಕೇಂದ್ರ ಸಮಿತಿಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದೆಂದು ಸಿರಿಮನೆ ನಾಗರಾಜು ಸ್ಪಷ್ಟಪಡಿಸಿದರು.

ಆರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಧಿಕ್ಕಾರದ ಘೋಷಣೆ ಕೇಳಿ ಬಂದವು, ಗಿರಿಜನ ಮುಖಂಡರುಗಳಾದ ಅಪ್ಪಾಜಿ ಹಾಗೂ ಮುತ್ತಮ್ಮ ಅವರು ಗಿರಿಜನರು ಅನುಭವಿಸುತ್ತಿರುವ ನರಕ ಯಾತನೆಯನ್ನು ಸಚಿವರೆದುರು ಬಿಚ್ಚಿಟ್ಟರು. ಇನ್ನು ಮುಂದೆ ಜೀತದಾಳುಗಳಾಗಿ ದುಡಿಯಲು ನಾವು ಸಿದ್ಧರಿಲ್ಲ. ಸ್ವಾಭಿಮಾನಿಗಳಾಗಿ ಬದುಕಲು ನಮಗೂ ಅವಕಾಶ ನೀಡಿ ಎಂದು ಒತ್ತಾಯಿಸಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X