ಅಪಘಾತ ಪ್ರಕರಣದ ಆರೋಪಿ ಸೆರೆ
ಬಂಟ್ವಾಳ, ಡಿ.19: ಲೊರೆಟ್ಟೊಪದವಿನಲ್ಲಿ ರೇಮಂಡ್ ಫೆೆರ್ನಾಂಡಿಸ್(59) ಎಂಬ ವರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಢಿಕ್ಕಿ ಹೊಡೆದು ಅವರ ಸಾವಿಗೆ ಕಾರಣ ನಾಗಿ ಪರಾರಿಯಾದ ಆರೋಪಿ ಮಾರುತಿ ಓಮ್ನಿ ಕಾರು ಚಾಲಕನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಕಳೆದ ಸೋಮವಾರ ಸಂಜೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೇಮಂಡ್ ಅವರಿಗೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು ಢಿಕ್ಕಿ ಹೊಡೆ ದಿತ್ತು. ಪರಿಣಾಮ ಗಂಭೀರ ಗಾಯಗೊಂಡ ಪೆರ್ನಾಂಡಿಸ್‌ರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದರಾದರೂ ಅವರು ದಾರಿ ಮಧ್ಯೆ ಮೃತಪಟ್ಟಿದ್ದರು. ಘಟನೆ ಬಳಿಕ ಕಾರು ಚಾಲಕ ತನ್ನ ವಾಹನ ನಿಲ್ಲಿಸದೆ ಪರಾರಿಯಾಗಿರುವ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ, ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ಆರೋಪಿ ಕಾರು ಚಾಲಕ ನವೀನ್ ಪೂಜಾರಿ ಎಂಬಾತನನ್ನು ಬಂಟ್ವಾಳ ಸಂಚಾರ ಠಾಣಾ ಪೊಲೀಸ್ ಸಿಬ್ಬಂದಿ ಬಂಧಿಸಿದ್ದಾರೆ.ಆರೋಪಿ ತಪ್ಪುಒಪ್ಪಿಕೊಂಡಿದ್ದಾನೆ ಆತ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.





