Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರದ 70 ಕೋ.ರೂ. ವಾಪಸ್: ರವಿಕುಮಾರ್

ಕೇಂದ್ರದ 70 ಕೋ.ರೂ. ವಾಪಸ್: ರವಿಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Dec 2016 10:14 PM IST
share

ಮಂಗಳೂರು, ಡಿ.20: ಬರಗಾಲ ಎದುರಿಸಲು ಕೇಂದ್ರ ಸರಕಾರ ರಾಜ್ಯಕ್ಕೆ 2,270 ಕೋ.ರೂ. ಬಿಡುಗಡೆ ಮಾಡಿತ್ತು. ಆದರೆ ರಾಜ್ಯ ಸರಕಾರ ಅದನ್ನು ಸದ್ಬಳಕೆ ಮಾಡದ ಕಾರಣ 70 ಕೋ.ರೂ. ವಾಪಸ್ ಹೋಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಸರಕಾದಿಂದ ಪರಿಹಾರ ಕೇಳುವುದಕ್ಕೆ ಆಕ್ಷೇಪವಿಲ್ಲ. ಆದರೆ ನೀಡಿದ್ದನ್ನು ಬಳಕೆ ಮಾಡಲು ಸಿದ್ದರಾಮಯ್ಯ ಸರಕಾರಕ್ಕೆ ಗೊತ್ತಿಲ್ಲ. ರಾಜ್ಯದ 134 ತಾಲೂಕುಗಳಲ್ಲಿ ಬರಗಾಲ ಪರಿಸ್ಥಿತಿ ಇದೆ ಎಂದು ಘೋಷಿಸಿದ್ದೇ ರಾಜ್ಯ ಸರಕಾರದ ಸಾಧನೆ. ರೈತರಿಗೆ ಪರಿಹಾರ, ಜಾನುವಾರುಗಳಿಗೆ ಮೇವು, ನೀರಿನ ಸೌಲಭ್ಯ ಕೊಡಿಸುವ ಪ್ರಾಥಮಿಕ ಜವಾಬ್ದಾರಿಯನ್ನೇ ಮರೆತ ಬೇಜವಾಬ್ದಾರಿ ಸರಕಾರ ಇದಾಗಿದೆ ಎಂದು ರವಿಕುಮಾರ್ ಟೀಕಿಸಿದರು.

ಸಚಿವರು, ಅಧಿಕಾರಿಗಳು ಸಮೀಕ್ಷೆ ನಡೆಸದೆ, ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ವರದಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರತ್ಯೇಕ ಸಮೀಕ್ಷೆ ನಡೆಸುತ್ತಿದ್ದು, ತಿಂಗಳಾಂತ್ಯಕ್ಕೆ ಸರಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಅವರು ಹೇಳಿದರು.

 ಮಡಿಕೇರಿಯ ದಿಡ್ಡಳ್ಳಿಯಲ್ಲಿ ವನವಾಸಿಗಳ ಒಕ್ಕಲೆಬ್ಬಿಸಿರುವುದು ಅಮಾನವೀಯ. ಮೊದಲು ಜಾಗ, ಮನೆ ಕೊಟ್ಟ ನಂತರ ಒಕ್ಕಲೆಬ್ಬಿಸಬೇಕಿತ್ತು ಎಂದ ಅವರು, ರಾಜ್ಯದ ಪರಿಶಿಷ್ಟರ ಮತ್ತು ಹಿಂದುಳಿದ ವರ್ಗದವರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಮೂಲಸೌಲಭ್ಯಗಳ ಮಾಹಿತಿ ಪಡೆಯಲಾಗುತ್ತಿದೆ. ಹಲವು ಕಡೆ ಕುಡಿಯುವ ಶುದ್ಧ ನೀರು, ಶೌಚಾಲಯ, ಸ್ನಾನಗೃಹ ಇಲ್ಲದಿರುವುದು, 10 ಮಂದಿಯ ಕೊಠಡಿಯಲ್ಲಿ 25 ಮಂದಿಯನ್ನು ಕೂಡಿ ಹಾಕಿರುವ ದಯನೀಯ ಸ್ಥಿತಿ ಇದೆ. ಶೇ.90ರಷ್ಟು ಕಡೆ ಕಂಪ್ಯೂಟರ್ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಪ್ರಭಾಮಾಲಿನಿ, ವಿಕಾಸ್ ಪುತ್ತೂರು, ಸಂಜಯ ಪ್ರಭು, ರಾಮ ಅಮೀನ್, ನಮಿತಾ ಉಪಸ್ಥಿತರಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X